ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿಗೆ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಬುಧವಾರ ಕೂಡಾ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮಾರನೇ ದಿನ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅಡ್ವಾಣಿ ಅವರಲ್ಲಿ ಮರಳಿ ಅನಾರೋಗ್ಯ ಕಾಣಿಸಿಕೊಂಡಿದೆ.
ಸದ್ಯ ಅಡ್ವಾಣಿ ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರ ತಂಡ ನಿಗಾ ಇಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
3 ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ, ಒಮ್ಮೆ ಕೇಂದ್ರ ಗೃಹ ಸಚಿವರಾಗಿ, ಒಮ್ಮೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಹಿರಿಮೆ ಹೊಂದಿರುವ ಅಡ್ವಾಣಿ ಅವರು ಸಲ್ಲಿಸಿರುವ ದೇಶಸೇವೆ ಪರಿಗಣಿಸಿ ಅವರಿಗೆ ಕೆಲ ದಿನಗಳ ಹಿಂದಷ್ಟೇ ಭಾರತ ರತ್ನ ಪ್ರಕಟಿಸಲಾಗಿತ್ತು. ಆದರೆ ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ವಯೋಸಹಜ ಕಾರಣಗಳಿಂದ ಬರಲಾಗದ ಹಿನ್ನೆಲೆಯಲ್ಲಿ ಸ್ವತಃ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಡ್ವಾಣಿ ಮನೆಗೆ ತೆರಳಿ ಪ್ರಶಸ್ತಿ ಪ್ರಧಾನ ಮಾಡಿ ಬಂದಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…