ದೇಶ- ವಿದೇಶ

ಬಿಹಾರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌: ಬಿಜೆಪಿ ವಿರುದ್ಧ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿ

ನವದೆಹಲಿ: ಪಾಟ್ನಾದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಪೊಲೀಸರ ಈ ಕ್ರೌರ್ಯದ ನಡೆಯನ್ನು ಕಾಂಗ್ರೆಸ್‌ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ.

ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಡಿಸೆಂಬರ್.13ರಂದು ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆ ವೇಳೆ ಹಲವಾರು ಕಡೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಲವರು ಗಾಯಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಾಟ್ಸಪ್‌ ಚಾನೆಲ್‌ನಲ್ಲಿ ಪ್ರತಿಕ್ರಿಯಿಸಿರುವ ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಲಾಠಿ ಚಾರ್ಜ್‌ ನಡೆಸಿರುವುದು ಕ್ರೌರ್ಯದ ಪರಮಾವಧಿ. ಬಿಜೆಪಿ ಆಡಳಿತದ ಅವಧಿಯಲ್ಲಿ ಯುವಕರು ಉದ್ಯೋಗ ಕೇಳುವ ಹಾಗಿಲ್ಲ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಕುರಿತು ಯುವಕರು ದೇಶದ ಯಾವುದೇ ಪ್ರದೇಶದಲ್ಲಿ ಧ್ವನಿ ಎತ್ತಿದರೂ ಬಿಜೆಪಿ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವಕರು ಈ ದೇಶದ ಮುಂದಿನ ಆಸ್ತಿ. ಅವರಿಗಾಗಿ ಯೋಜನೆ ರೂಪಿಸುವುದು ಸರ್ಕಾರದ ಕರ್ತವ್ಯ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಉದ್ಯೋಗಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆಗಳನ್ನು ಹೊರಡಿಸುವ ಬದಲು ತಮ್ಮ ಕುರ್ಚಿ ಉಳಿಸಿಕೊಳ್ಳುವ ಯೋಚನೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

2 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

3 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

4 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

4 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

10 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

10 hours ago