ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಲಾಲು ಪ್ರಸಾದ್ ಅವರ ಪುತ್ರ, ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್, ಪುತ್ರಿ ಹೇಮಾ ಯಾದವ್ ಮತ್ತು ಬಿಹಾರದ ಮಾಜಿ ಸಿಎಂ ತೇಜಸ್ವಿ ಯಾದವ್ ಅವರಿಗೂ ಹೊಸ ನೋಟಿಸ್ ನೀಡಿದ್ದಾರೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್.11 ರಂದು ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಏನಿದು ಪ್ರಕರಣ?
2004 ರಿಂದ 2009ರವರೆಗೂ ಕೇಂದ್ರ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಅವರು ಗ್ರೂಪ್ ಡಿ ಹುದ್ದೆಗಳಿಗೆ ನೇಮಕವಾದವರಿಂದ ಭೂಮಿಯನ್ನು ಪಡೆದುಕೊಂಡು ತಮ್ಮ ಕುಟುಂಬಸ್ಥರು ಹಾಗೂ ಆಪ್ತರ ಹೆಸರುಗಳಿಗೆ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿ ಲಾಲು ಪ್ರಸಾದ್ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶಾನಲಯ ಸಂಸ್ಥೆ ಪ್ರಕರಣ ದಾಖಲಿಸಿಕೊಂಡಿತ್ತು.