ಇಟಾನಗರ: ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಮಳೆಯ ಆರ್ಭಟಕ್ಕೆ ಭಾರೀ ಭೂಕುಸಿತ ಉಂಟಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ.
ಈಸ್ಟ್ ಕಮಾಂಗ್ ಜಿಲ್ಲೆಯಲ್ಲಿ ಬೃಹತ್ ಗುಡ್ಡ ಕುಸಿದ ಪರಿಣಾಮ 7 ಜನರು ಮೃತಪಟ್ಟಿದ್ದು, ಲೋವರ್ ಸುಬನ್ಸುರಿ ಪ್ರದೇಶದಲ್ಲಿ ಗುಡ್ಡ ಕುಸಿತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. ಗುಡ್ಡ ಕುಸಿತದಿಂದಾಗಿ ಮನೆಗಳು ಸಂಪೂರ್ಣ ನೆಲಸಮವಾಗಿವೆ.
ಇದನ್ನೂ ಓದಿ:- ಮಂಡ್ಯ| ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಮಗು ಸಾವು?
ಘಟನೆಯಲ್ಲಿ ಹಲವರು ಕಣ್ಮರೆಯಾಗಿದ್ದು, ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ.





