ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ ಸಿಲುಕಿಕೊಂಡಿದ್ದಾರೆ.
ಮಂಗಳವಾರ ರಾತ್ರಿ (ಮಾ.24) ಚುಂಗ್‌ಥಾಂಗ್-ಲಾಚೆನ್ ಮಾರ್ಗದ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ ಲಾಚೆನ್‌ಗೆ ತೆರಳುತ್ತಿದ್ದ ಪ್ರವಾಸಿಗರು ಮಧ್ಯದಲ್ಲಿ ಸಿಲುಕಿಕೊಂಡಿದ್ದಾರೆ. ಸಂಕಷ್ಟಕ್ಕೆ ಸಿಲುಕಿದ ಪ್ರವಾಸಿಗರಿಗೆ ಚುಂಗ್‌ಥಾಂಗ್‌ನಲ್ಲಿರುವ ಐಟಿಬಿಪಿ ಶಿಬಿರ ಮತ್ತು ಗುರುದ್ವಾರದಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮಂಗನ್ ಜಿಲ್ಲಾಧಿಕಾರಿ ಅನಂತ್ ಜೈನ್ ಮಾಹಿತಿ ನೀಡಿದ್ದಾರೆ.
ರಸ್ತೆಗಳಲ್ಲಿ ಬಿದ್ದಿರುವ ಕಲ್ಲು ಹಾಗೂ ಮಣ್ಣಿನ ತೆರವು ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಭೂಕುಸಿತದ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿ ಈ ಮಾರ್ಗಗಳು ಸಂಚಾರಕ್ಕೆ ಸುರಕ್ಷಿತವೆಂದು ಘೋಷಿಸಿದ ನಂತರ ಪ್ರವಾಸಿಗರಿಗೆ ಅವಕಾಶ ನೀಡಬಹುದು ಎಂದು ಅವರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ನಿರಂತರ ಮಳೆಯಾಗುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಭಾರೀ ಹಿಮಪಾತದಿಂದಾಗಿ ತ್ಸೊಮ್ಗೊ ಸರೋವರ ಮತ್ತು ನಾಥುಲಾದಂತಹ ಪ್ರಮುಖ ಪ್ರವಾಸಿ ತಾಣಗಳು ಮುಚ್ಚಲ್ಪಟ್ಟಿವೆ.
2023ರ ಹಿಮನದಿ ಸರೋವರ ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾದ ಲಾಚೆನ್ ಮಾರ್ಗವು ಇತ್ತೀಚೆಗೆ ಮಾರ್ಚ್ 9 ರಂದು ಮತ್ತೆ ತೆರೆಯಲ್ಪಟ್ಟಿತ್ತು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…