ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಐಐಟಿ ಮದ್ರಾಸ್‌ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರವು ರಾಜ್ಯಗಳ ಮೇಲೆ ‘ತ್ರಿಭಾಷಾ ನೀತಿ’ನ್ನು ಹೇರುತ್ತಿದೆ ಎನ್ನುವುದು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದರು.
ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. ೧ ಮತ್ತು ೨ನೇ ತರಗತಿಗಳಿಗೆ ದ್ವಿಭಾಷಾ ಸೂತ್ರ ಇರುತ್ತದೆ. ಇದರಲ್ಲಿ ಒಂದು ಮಾತೃಭಾಷೆ. ತಮಿಳುನಾಡಿನಲ್ಲಾದರೆ ಇದು ತಮಿಳು ಭಾಷೆಯಾಗಿರುತ್ತದೆ. ಇದರ ಜತೆಗೆ ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ಕಲಿಸಬಹುದು ಎಂದರು. ೬ರಿಂದ ೧೦ನೇ ತರಗತಿವರೆಗೆ ‘ತ್ರಿಭಾಷಾ ಸೂತ್ರ’ ಇರುತ್ತದೆ. ಒಂದು ಮಾತೃಭಾಷೆಯಾದರೆ, ಇನ್ನೆರಡು ಆಯ್ಕೆಯ ಭಾಷೆಯಾಗಿರುತ್ತವೆ ಎಂದು ಪ್ರಧಾನ್ ಸ್ಪಷ್ಟಪಡಿಸಿದರು.
ಉತ್ತರ ಪ್ರದೇಶದಂತ ರಾಜ್ಯಗಳಲ್ಲಿ ತ್ರಿಭಾಷಾ ಸೂತ್ರವನ್ನು ಹೇಗೆ ಜಾರಿಗೊಳಿಸುತ್ತೀರಿ ಎಂಬ ಪ್ರಶ್ನೆಗೆ, ನಾವು ಆ ರಾಜ್ಯದಲ್ಲೂ ಈ ಸೂತ್ರ ಜಾರಿಗೊಳಿಸುತ್ತೇವೆ. ವಿದ್ಯಾರ್ಥಿಯೊಬ್ಬ ಹಿಂದಿಯನ್ನು ಮಾತೃಭಾಷೆಯಾಗಿ, ನಂತರ ಮರಾಠಿಯನ್ನು ಬಳಿಕ ತಮಿಳನ್ನೂ ಕಲಿಯುತ್ತಾನೆ. ಉತ್ತರ ಪ್ರದೇಶದಲ್ಲಿ ಮೂರನೆಯ ಭಾಷೆಯಾಗಿ ‘ತಮಿಳು’ ಕಲಿಯಲೂ ಅವಕಾಶವಿದೆ ಎಂದು ಅವರು ಹೇಳಿದರು.
ಭಾಷೆಗಳು ಯಾವಾಗಲೂ ಸಹಾಯಕವಾಗಿರುತ್ತವೆ. ರಾಜಕೀಯವಾಗಿ ಸಂಕುಚಿತ ಆಲೋಚನೆಗಳನ್ನು ಹೊಂದಿರುವವರು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ ಎಂದ ಪ್ರಧಾನ್, ಹಲವು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿಗೂ ಮುನ್ನವೇ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲು ಹೊರಟಿವೆ ಎಂದರು.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…