ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಅವರನ್ನು ಸುಪ್ರೀಂಕೋರ್ಟ್ ಬಾರ್ ಅಸೋಷಿಯೇಷನ್ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಛಾಟಿಸಿದ್ದು, ಅವರ ಪ್ರವೇಶ ಪತ್ರವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆವರಣಕ್ಕೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ.
ಇದನ್ನು ಓದಿ : ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಹೇಳೊದೇನು?
ಅಕ್ಟೋಬರ್.6ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆಯ ಸಂದರ್ಭದಲ್ಲಿ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿದ್ದರು. ಅವರ ಕೃತ್ಯಕ್ಕೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಪ್ರತಿಭಟನೆ ಕೂಡ ನಡೆಸಲಾಗಿದ್ದು, ವಕೀಲನ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.





