ದೇಶ- ವಿದೇಶ

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. ಇದೀಗ ಆ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ನಟ ಕಂ ರಾಜಕಾರಣಿ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.

ಟಿವಿಕೆಗೆ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸುವ ಮೂಲಕ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಂತಾಗಿದೆ. ಶೀಘ್ರದಲ್ಲೇ ವಿಜಯ್ ಬಹುಮತದ ಬೆಂಬಲದ ಪತ್ರದೊಂದಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನವನ್ನು ಅಂತಿಮಗೊಳಿಸಲಿದ್ದಾರೆ. ವಿಜಯ್ ಇಂದು ಸಂಜೆ 6 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಆಗ ವಿಜಯ್ ಮತ್ತೆ ಹಕ್ಕು ಮಂಡಿಸುವ ನಿರೀಕ್ಷೆಯಿದೆ. ಈ ವಾರ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಬಗ್ಗೆ ರಾಜ್ಯಪಾಲರೊಂದಿಗೆ ಅವರ ನಾಲ್ಕನೇ ಸಭೆ ಇದಾಗಿದೆ.

234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ತನ್ನ 5 ಶಾಸಕರೊಂದಿಗೆ ಬೆಂಬಲವನ್ನು ನೀಡಿದೆ. ತಲಾ ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ ಮತ್ತು ಸಿಪಿಐ(ಎಂ) ಸಹ ಇಂದಿನ ಸಭೆಗಳ ನಂತರ ಟಿವಿಕೆಯನ್ನು ಬೆಂಬಲಿಸಿವೆ. ಇಬ್ಬರು ಶಾಸಕರನ್ನು ಹೊಂದಿರುವ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಕೂಡ ವಿಜಯ್ ಅವರನ್ನು ಬೆಂಬಲಿಸಲು ಒಪ್ಪಿಕೊಂಡಿದೆ. ಇದರಿಂದ ಟಿವಿಕೆಗೆ ಅಗತ್ಯವಾದ 118 ಸ್ಥಾನಗಳ ಮ್ಯಾಜಿಕ್ ನಂಬರ್ ಸಿಗುವುದರಿಂದಾಗಿ ವಿಜಯ್ ಪಟ್ಟಾಭಿಷೇಕ ಖಚಿತವಾದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago