ಹೈದರಾಬಾದ್: ಅದಿರು ಪೂರೈಕೆಯಲ್ಲಿ ಸ್ಥಿರತೆಯನ್ನು ಸಮರ್ಥವಾಗಿ ಕಾಪಾಡಿಕೊಳ್ಳಬೇಕು ಹಾಗೂ ಉಕ್ಕು ತಯಾರಿಕಾ ಘಟಕಗಳಿಗೆ ಕಬ್ಬಿಣದ ಅದಿರು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ (NMDC) ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೈದರಾಬಾದ್ ನಲ್ಲಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವರು, ಬೃಹತ್ ಉಕ್ಕು ತಯಾರಿಕಾ ಘಟಕಗಳಿಗೆ ಅದಿರು ಪೂರೈಕೆ ಮಾಡುವಂತೆಯೇ ಮಧ್ಯಮ, ಸಣ್ಣ, ಅತಿ ಸಣ್ಣ ಉಕ್ಕು ತಯಾರಿಕಾ ಘಟಕಗಳಿಗೂ ಅದಿರು ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಘಟಕಗಳಿಗೆ ಅದಿರು ಪೂರೈಕೆಯಲ್ಲಿ ಸಮತೋಲನ, ಸ್ಥಿರತೆ ಕಾಪಾಡಿಕೊಂಡರೆ ಹೆಚ್ಚೆಚ್ಚು ಉದ್ಯೋಗ ಸೃಷ್ಟಿ ಮಾಡಬಹುದು. ಆ ಮೂಲಕ ಉಕ್ಕು ವಲಯದಿಂದ ಒಟ್ಟು ದೇಶೀಯ ಉತ್ಪನ್ನಕ್ಕೆ (GDP) ದೊಡ್ಡ ಕೊಡುಗೆ ನೀಡಬಹುದು. ಇದುವೇ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕನಸು ಎಂದು ಅಧಿಕಾರಿಗಳಿಗೆ ಹೇಳಿದರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು.
2024ಕ್ಕೆ ವಾರ್ಷಿಕ 100 ದಶಲಕ್ಷ ಟನ್ ಕಬ್ಬಿಣದ ಅದಿರು ಹೊರ ತೆಗೆಯುವ ನಿಗಮದ ಗುರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು; ಗಣಿಗಾರಿಕೆಯನ್ನು ಇನ್ನೂ ಪರಿಣಾಮಕಾರಿಯಾಗಿ ಮಾಡುವ ಮೂಲಕ ಅದಿರು ಉತ್ಪಾದನೆಯಲ್ಲಿ ಹೆಚ್ಚಳ ಸಾಧಿಸಿ. ವಾರ್ಷಿಕ 300 ದಶಲಕ್ಷ ಟನ್ ಉಕ್ಕು ತಯಾರಿಸುವ ಗುರಿಯನ್ನು ಪ್ರಧಾನಿಗಳು ನೀಡಿದ್ದಾರೆ. ಅದನ್ನು ದುಪ್ಪಟ್ಟು ಮಾಡುವ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ ಕೆಲಸ ಮಾಡಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಚ್ಚು ಪ್ರಮಾಣದಲ್ಲಿ ಗಣಿಗಾರಿಕೆಯನ್ನು ಮಾಡಬೇಕು, ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಅರಣ್ಯ ಬೆಳೆಸಬೇಕು ಎಂದು ಅಧಿಕಾರಿಗಳಿಗೆ ನೇರವಾಗಿ ಹೇಳಿದ ಸಚಿವರು; ಗಣಿಗಾರಿಕೆ, ಪೂರೈಕೆ ಹಾಗೂ ಉಕ್ಕು ತಯಾರಿಕೆಯ ಸರಪಳಿಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದರು.
ಕಬ್ಬಿಣ, ಚಿನ್ನ, ವಜ್ರದ ಗಣಿಗಾರಿಕೆ ನಡೆಸುತ್ತಿರುವ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ ಸಾಧನೆಯ ಪಕ್ಷಿನೋಟ ವೀಕ್ಷಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಎಲ್ಲಾ ಸಹಕಾರವೂ ಇರುತ್ತದೆ ಎಂದು ಸಚಿವರು ಭರವಸೆ ನೀಡಿದರು.
ಪ್ರಧಾನಿಗಳ ಮಾರ್ಗದರ್ಶನದೊಂದಿಗೆ ಅವರೇ ನಿಗದಿ ಮಾಡಿರುವ ಗುರಿಯನ್ನು ಮುಟ್ಟಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ಹೇಳಿದರು.
ನಿಗಮದ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಅಮಿತ್ವ ಮುಖರ್ಜಿ ಅವರು ನಿಗಮದ ಕಾರ್ಯ ಚಟುವಟಿಕೆ ಹಾಗೂ ಇನ್ನಿತರೆ ವಿವರಗಳ ಬಗ್ಗೆ ಸಚಿವರಿಗೆ ಪ್ರಾತ್ಯಕ್ಷಿಕೆ ನೀಡಿದರು.
ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ರಾಜ್ಯ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮ ಸೇರಿ ನಿಗಮದ ವಿವಿಧ ನಿರ್ದೇಶಕರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…