ದೇಶ- ವಿದೇಶ

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಜ್ಞಾನೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಲು ಗಡುವು ನೀಡಿದ್ದಾರೆ.

ಸೆಪ್ಟೆಂಬರ್ 26ರೊಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಒಂದು ವೇಳೆ ರಾಜೀನಾಮೆ ನೀಡದಿದ್ದರೆ, ಅಕ್ಟೋಬರ್ 2ರಿಂದ ದೇಶಾದ್ಯಂತ ಪ್ರತಿಭಟನೆ ಆರಂಭಿಸುವುದಾಗಿ ಅಭಿಜಿತ್ ದೀಪ್ಕೆ ಘೋಷಿಸಿದ್ದಾರೆ. ಗಾಂಧಿ ಜಯಂತಿಯಂದು ಪ್ರಜಾಪ್ರಭುತ್ವ ರಕ್ಷಿಸಲು ಪ್ರತಿಜ್ಞೆ ಮಾಡೋಣ ಎಂದು ಅವರು ಕರೆ ನೀಡಿದ್ದಾರೆ.

ಸೆಪ್ಟೆಂಬರ್ 25ರಂದು ನೀಡಿರುವ ಹೇಳಿಕೆಯ ಪ್ರಕಾರ, ಅಕ್ಟೋಬರ್ 2ರಂದು ಮುಂಬೈನಿಂದ ಪ್ರತಿಭಟನೆ ಆರಂಭಿಸಿ, ನಂತರ ದೇಶದ ವಿವಿಧ ನಗರಗಳಿಗೆ ಪ್ರತಿಭಟನೆಯನ್ನು ವಿಸ್ತರಿಸುವುದಾಗಿ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಆಯೋಗದ ಕಾರ್ಯವೈಖರಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸಿಜೆಪಿ ಈ ಪ್ರತಿಭಟನೆಗೆ ಕರೆ ನೀಡಿದೆ.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಬೇಕು ಎಂಬುದು ತಮ್ಮ ಪ್ರಮುಖ ಬೇಡಿಕೆ ಎಂದು ಅಭಿಜಿತ್ ದೀಪ್ಕೆ ಹೇಳಿದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 min ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

46 mins ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

53 mins ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

4 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

10 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

10 hours ago