ದೇಶ- ವಿದೇಶ

ಲೋಕಸಭಾ ಚುನಾವಣೆ 2024: ಆರನೇ ಹಂತದಲ್ಲಿ ಶೇ.59ರಷ್ಟು ಮತದಾನ ದಾಖಲು

ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ ಮತದಾನದಲ್ಲಿ ಪಶ್ಚಿಮ ಬಂಗಾಳದಲ್ಲಿ ಶೇ.78.19ರಷ್ಟು ಮತದಾನವಾಗಿದ್ದು, ದೆಹಲಿಯಲ್ಲಿ ಶೇ.34.4 ಅಂದರೆ ಅತ್ಯಂತ ಕಡಿಮೆ ಮತದಾನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ -ರಜೌರಿ ಲೋಕಸಭಾ ಕ್ಷೇತ್ರದಲ್ಲಿ 52.28 ರಷ್ಟು ಮತದಾನವಾಗಿದ್ದು, ಹಲವು ದಶಕಗಳಲ್ಲಿ ನಡೆದಿರುವ ಅತ್ಯಧಿಕ ಮತದಾನ ಪ್ರಮಾಣ ಇದಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಪ್ರಮುಖರು ತಮ್ಮ ಮತದಾನದ ಹಕ್ಕನ್ನು ದೆಹಲಿಯಲ್ಲಿ ಚಲಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು | ಅರಣ್ಯದಲ್ಲಿ 292 ಗಾಂಜಾ ಗಿಡಗಳು ಪತ್ತೆ ; 213 ಕೆಜಿ ಗಾಂಜಾ ವಶ

ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…

10 hours ago

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…

13 hours ago

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

14 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

14 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

21 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

21 hours ago