Mysore
14
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

Teacher Transfers Spark Student Protest; Classes Boycotted

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ‘ವಿಕಸಿತ್ ಭಾರತ್ ಜಿ ರಾಮ್ ಜಿ’ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.

೨೦ ವರ್ಷಗಳಷ್ಟು ಹಳೆಯದಾದ ಮನ್ರೇಗಾ ಬದಲಿಗೆ ಪ್ರತಿ ವರ್ಷ ೧೨೫ ದಿನಗಳ ಗ್ರಾಮೀಣ ಉದ್ಯೋಗಗಳನ್ನು ಖಾತರಿಪಡಿಸುವ ವಿಬಿ-ಜಿ ರಾಮ್ ಜಿ ಮಸೂದೆ – ೨೦೨೫ ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.

ಇದನ್ನೂ ಓದಿ:-ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಗುರುವಾರ ಮಸೂದೆ ಮೇಲಿನ ಚರ್ಚೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಉತ್ತರಿಸಿದ ನಂತರ, ಅದನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ, ಲೋಕಸಭೆಯು ಜಿ ರಾಮ್ ಜಿ ಮಸೂದೆ ಅಂಗೀಕರಿಸಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು.

ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿದ್ದನ್ನು ವಿರೋಧಿಸಿ, ಪ್ರತಿಪಕ್ಷಗಳ ಸದಸ್ಯರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಪಕ್ಷಗಳ ತೀವ್ರ ಗದ್ದಲದ ಪರಿಣಾಮವಾಗಿ, ಓಂ ಬಿರ್ಲಾ ಅವರು ಲೋಕಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರು.

Tags:
error: Content is protected !!