ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಪ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ನಡೆದ ಬಳಿಕ ರಾಹುಲ್ ಗಾಂಧಿ ತೆರಳಿದರು. ಬಳಿಕ ಇಂಡಿಯಾ ಒಕ್ಕೂಟದ ನಾಯಕರು ಸರ್ವಾನುಮತದಿಂದ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕೃತ ವಿರೋಧ ಪಕ್ಷವಾಗಿದೆ. ಇನ್ನು ಮುಂದೆ ಎನ್‌ಡಿಎ ಮೈತ್ರಿಕೂಟದ ಆಡಳಿತಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿ ಕುಳಿತು ಟಕ್ಕರ್ ಕೊಡಲಿದ್ದಾರೆ.