ನವದೆಹಲಿ: ಬಡವರ ಮನೆಯಲ್ಲಿ ಫೋಟೋಶೂಟ್ ಮಾಡಿಸಿ ಕೆಲವರು ಮನರಂಜನೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಡವರ ಮಾತು ಬೋರ್ ಆಗಲಿದೆ. ನಾನು ಅವರ ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ನಾವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಯಸುತ್ತೇವೆ. ನಮ್ಮ ದೇಶದಲ್ಲಿ ಪ್ರಧಾನ ಮಂತ್ರಿ ಇದ್ದರು. ಅವರನ್ನು ಮಿಸ್ಟರ್ ಕ್ಲೀನ್ ಎಂದು ಕರೆಯಲಾಗುತ್ತಿತ್ತು. ಒಂದು ರೂಪಾಯಿ ಬಿಡುಗಡೆ ಮಾಡಿದರೆ ಬಡವರಿಗೆ 15 ಪೈಸೆ ತಲುಪುತ್ತದೆ ಎಂದು ಹೇಳಿದ್ದರು. ಎಲ್ಲಾ ಕಡೆ ಅವರದ್ದೇ ಸರ್ಕಾರ ಇದ್ದರೂ ಈ ಹೇಳಿಕೆ ನೀಡಿದ್ದರು. ಬಾಕಿ ಹಣ ಎಲ್ಲಿ ಹೋಗುತ್ತಿತ್ತು ಆ ಬಗ್ಗೆ ಜನರಿಗೆ ಗೊತ್ತಿದೆ. ಉಳಿತಾಯ ಮತ್ತು ಅಭಿವೃದ್ಧಿಯೇ ನಮ್ಮ ಧ್ಯೇಯ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಡವರಿಗೆ ಸುಳ್ಳಿನ ಘೋಷಣೆ ಅಲ್ಲ. ಸತ್ಯವಾದ ಅಭಿವೃದ್ಧಿ ನೀಡಿದ್ದೇವೆ. ಮಧ್ಯಮ ವರ್ಗದ ಕನಸು ಈಡೇರಿಸಿದ್ದೇವೆ. ಬಡವರಿಗೆ ಈವರೆಗೂ ನಾಲ್ಕು ಕೋಟೆ ಮನೆ ಸಿಕ್ಕಿದೆ. ಮಹಿಳೆಯರಿಗೆ 12 ಕೋಟಿಗೂ ಅಧಿಕ ಶೌಚಾಲಯ ನಿರ್ಮಾಣ ಮಾಡಿದ್ದೇವೆ. ಪ್ರತಿ ಮನೆಗೆ ಕುಡಿಯುವ ನೀರು ನೀಡುವುದು ನಮ್ಮ ಉದ್ದೇಶ. ಜಲ ಜೀವನ್ ಮಿಷನ್ ಅಡಿ 12 ಕುಟುಂಬಗಳಿಗೆ ಕುಡಿಯುವ ನೀರು ನೀಡಿದ್ದೇವೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…