ನವದೆಹಲಿ: ಸುಪ್ರೀಂಕೋರ್ಟ್ ಮಾರ್ಚ್.18 ರಂದು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧದ ಲೋಕಪಾಲ ಆದೇಶಕ್ಕೆ ತಡೆ ನೀಡಿರುವ ಸ್ವಯಂಪ್ರೇರಿತ ದೂರಿನ ಅರ್ಜಿ ವಿಚಾರಣೆಯನ್ನು ಮಾಡಲಿದೆ.
ಈ ಅರ್ಜಿಯನ್ನು ಅಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಅಭಯ್ ಎಸ್.ಓಕಾ ಮತ್ತು ಸೂರ್ಯಕಾಂತ್ ಅವರ ವಿಶೇಷ ನ್ಯಾಯಪೀಠವೂ ವಿಚಾರಣೆ ನಡೆಸಲಿದೆ ಎಂ ಮಾಹಿತಿ ಲಭ್ಯವಾಗಿದೆ.
ಸುಪ್ರೀಂಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಲೋಕಪಾಲ ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಆದರೆ ಫೆಬ್ರವರಿ.20ರಂದು ಲೋಕಪಾಲ ಆದೇಶಕ್ಕೆ ತಡೆ ನೀಡಿತ್ತು.
ಇನ್ನು ಕೇಂದ್ರ ಸರ್ಕಾರ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಲೋಕಪಾಳ ರಿಜಿಸ್ಟ್ರಾರ್ ಮತ್ತು ಹೈಕೋರ್ಟ್‌ನ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ದೂರು ಸಲ್ಲಿಸಿರುವ ವ್ಯಕ್ತಿಗೂ ಸಮನ್ಸ್ ಜಾರಿ ಮಾಡಿತ್ತು.
ಏನಿದು ಪ್ರಕರಣ?
ದೂರುದಾರನ ವಿರುದ್ಧ ಖಾಸಗಿ ಕಂಪೆನಿಯೊಂದು ದಾಖಲಿಸಿ, ಈ ದೇಶದ ಹೈಕೋರ್ಟ್‌ವೊಂದರ ನ್ಯಾಯಮೂರ್ತಿ ಒಬ್ಬರು ಅರ್ಜಿ ವಿಚಾರಣೆಯನ್ನು ನಡೆಸಬೇಕಿತ್ತು. ಆದರೆ ಹೈಕೋರ್ಟ್‌ನ ನ್ಯಾಯಮೂರ್ತಿ ಒಬ್ಬರು ಆ ಖಾಸಗಿ ಕಂಪೆನಿಗೆ ಅನುಕೂಲ ಮಾಡಕೊಡುವ ಸಲುವಾಗಿ ಜಿಲ್ಲಾ ನ್ಯಾಯಾಲಯವೊಂದ ಹೆಚ್ಚುವರಿ ನ್ಯಾಯಾಧೀಶ ಮತ್ತು ಅರ್ಜಿ ವಿಚಾರಣೆ ನಡೆಸಬೇಕಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿಯ ಮೇಲೆ ಪ್ರಭಾವ ಬೀರಿದ್ದರು ಎಂದು ಆರೋಪಿಸಿ ಅರ್ಜಿದಾರ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದರು.
ಈ ದೂರುಗಳನ್ನು ಪರಿಗಣಿಸಿದ ಲೋಕಪಾಲ ಸಂಸ್ಥೆಯೂ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ಜನವರಿ.27ರಂದು ಆದೇಶ ನೀಡಿತ್ತು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…