Mysore
25
overcast clouds
Light
Dark

Loksabha Election Results 2024: ಇಂಡಿಯಾ ಮೈತ್ರಿಕೂಟ ಗೆದ್ದಿದೆ, ಮೋದಿ ಸೋತಿದ್ದಾರೆ: ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ  30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.

ಇಂದಿನ ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ ಅರ್ಪಿಸಿ ಮಾತನಾಡಿದ ಅವರು, ಇಂಡಿಯಾ ಬಣ ಗೆದ್ದಿದೆ. ಮೋದಿ ಸೋತಿದ್ದಾರೆ. ಮೋದಿ ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂಬುದು ಈ ಫಲಿತಾಂಶದಿಂದ ಗೊತ್ತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದಿದ್ದಾರೆ.

ಮೋದಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ. ಈ ಬಾರಿ 400 ಸೀಟು ಗೆಲ್ಲುತ್ತೇವೆ ಎಂದ ಮೋದಿ ಅವರು ವಿಶ್ವಾಸಾರ್ಹತೆ ಕಳೆದುಕೊಂಡಿದ್ದಾರೆ. ಈ ಹೊಣೆ ಹೊತ್ತು ಮೋದಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಮೋದಿ ಹಾಗೂ ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

ಮಮತ ಬ್ಯಾನರ್ಜಿ ಇಂಡಿಯಾ ಬಣದ ಭಾಗವಾಗಿದ್ದರೂ, ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ 30 ಸ್ಥಾನ ಗೆದ್ದಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ಹಾಗೂ ಸಿಪಿಐಎಂ ಒಟ್ಟಿಗೆ ಸ್ಪರ್ಧಿಸಿದ್ದವು.