ಭಾಗಲ್‌ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತವನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದ ಭಾಗಲ್‌ಪುರದಲ್ಲಿ ಶನಿವಾರ ( ಏಪ್ರಿಲ್ 20 ) ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನವನ್ನು ರದ್ದುಗೊಳಿಸಲು ಸಂಚು ರೂಪಿಸಿದೆ. ಭಾರತದ ಬಡವರು, ದಲಿತರು, ಬುಡಕಟ್ಟು ಸಮುದಾಯದವರಿಗೆ ದೊರಕಿರುವ ಸೌಲಭ್ಯಗಳೆಲ್ಲಾ ಸಂವಿಧಾನದಿಂದ ಬಂದದ್ದು, ಒಂದು ವೇಳೆ ಸಂವಿಧಾನವನ್ನು ಬದಲಾಯಿಸಿದರೆ ನಿಮ್ಮ ಸೌಲಭ್ಯಗಳೆಲ್ಲಾ ಕೊನೆಗೊಳ್ಳಲಿದೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ದೇಶದ ಕೆಲವೇ ಕೆಲ ಶ್ರೀಮಂತರ ಪರವಾಗಿ ಇದೆ. ಇಡೀ ದೇಶದ ಸಂಪತ್ತು ಕೇವಲ 22 ಜನರಲ್ಲಿ ಇದೆ. ಇದನ್ನು ಬದಲಾಯಿಸಲು ನಾವು ಬಯಸುತ್ತೇವೆ ಎಂದರು. ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ. ಆದರೆ ವಾಸ್ತವವಾಗಿ 150 ಸ್ಥಾನಗಳನ್ನು ಅದು ಗೆಲ್ಲುವುದಿಲ್ಲ ಎಂದು ಹೇಳಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…