ಪಶ್ಚಿಮ ಬಂಗಾಳ: ಇಂದು (ಏ.19) ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈಗಾಗಲೇ ಜನ ಮತಗಟ್ಟೆಯತ್ತ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ನ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಅಹಿತಕರ ಘಟನೆ ನಡೆದಿದೆ.
ಚಂದ್ಮರಿ ಗ್ರಾಮದ ಮತಗಟ್ಟೆಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು, ಮತದಾನಕ್ಕೆ ಅಡ್ಡಿಪಡಿಸಲಾಗಿದೆ ಎನ್ನಲಾಗಿದೆ. ಬೆಳಿಗ್ಗೆಯಿಂದ ಶಾಂತಿಯುತ ಮತದಾನ ನಡೆಯುತ್ತಿದೆ ಎನ್ನಲಾಗಿತ್ತು. ಆದರೆ ಇದೀಗ ಕೂಚ್‌ಬೆಹಾರ್ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.
ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಪೊಲೀಸ್ ಬಂದೊಬಸ್ತ್ ಹೆಚ್ಚಿಸಲಾಗಿದೆ. ಆದರು ಇಂತಹ ಘಟನೆ ನಡೆದಿದೆ. ಮತಗಟ್ಟೆಯ ಮೇಲೆ ಕಲ್ಲು ತೂರಾಟ ಮಾಡುವ ವಿಡೀಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.