ದೇಶ- ವಿದೇಶ

ಲೋಕಸಭೆ ಚುನಾವಣೆ 2024: ಪಶ್ಚಿಮ ಬಂಗಾಳದಲ್ಲಿ ಮತಗಟ್ಟೆ ಮೇಲೆ ಕಲ್ಲು ತೂರಾಟ

ಪಶ್ಚಿಮ ಬಂಗಾಳ: ಇಂದು (ಏ.19) ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈಗಾಗಲೇ ಜನ ಮತಗಟ್ಟೆಯತ್ತ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ನ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಅಹಿತಕರ ಘಟನೆ ನಡೆದಿದೆ.

ಚಂದ್ಮರಿ ಗ್ರಾಮದ ಮತಗಟ್ಟೆಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು, ಮತದಾನಕ್ಕೆ ಅಡ್ಡಿಪಡಿಸಲಾಗಿದೆ ಎನ್ನಲಾಗಿದೆ. ಬೆಳಿಗ್ಗೆಯಿಂದ ಶಾಂತಿಯುತ ಮತದಾನ ನಡೆಯುತ್ತಿದೆ ಎನ್ನಲಾಗಿತ್ತು. ಆದರೆ ಇದೀಗ ಕೂಚ್‌ಬೆಹಾರ್‌ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.

ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಪೊಲೀಸ್‌ ಬಂದೊಬಸ್ತ್‌ ಹೆಚ್ಚಿಸಲಾಗಿದೆ. ಆದರು ಇಂತಹ ಘಟನೆ ನಡೆದಿದೆ. ಮತಗಟ್ಟೆಯ ಮೇಲೆ ಕಲ್ಲು ತೂರಾಟ ಮಾಡುವ ವಿಡೀಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

44 mins ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

5 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

5 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

5 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

5 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

5 hours ago