Mysore
21
haze

Social Media

ಬುಧವಾರ, 28 ಜನವರಿ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ, ಒಡಿಶಾದಲ್ಲಿ ಮೊಂಥಾ ಚಂಡಮಾರುತದ ಅಬ್ಬರ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನ ಕರಾವಳಿ ಭಾಗದಲ್ಲಿ 90-100 ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಚಂಡಮಾರುತಕ್ಕೆ ಮೊಂಥಾ ಎಂಬ ಹೆಸರು ಇಡಲಾಗಿದೆ. ಅ.27ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ನಾಳೆ ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯುವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.

ಚಂಡಮಾರುತ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ.28ರವರೆಗೂ ಮಳೆ ಮುಂದುವರಿಯಲಿದೆ. ಆಂಧ್ರಪ್ರದೇಶದ ರಾಯಲಸೀಮಾ ಪ್ರದೇಶದಲ್ಲಿ ಅ.27ರಿಂದ ಭಾರಿ ಮಳೆಯಾಗಲಿದ್ದು, ಮೊಂತಾ ಚಂಡಮಾರುತ ರಾಜ್ಯದ ಮಚಲೀಪಟ್ಟಣ ಮತ್ತು ಕಾಳಿಂಗಪಟ್ಟಣಂ ಪ್ರದೇಶವನ್ನು ದಾಟಲಿದೆ. ಅ.28ರಂದು ಕಾಕಿನಾಡವನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ವಿಕೋಪ ಎದುರಿಸಲು ಸರ್ವಸನ್ನದ್ಧವಾಗಿವೆ.

ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತ ಪಶ್ಚಿಮಾಭಿಮುಖವಾಗಿ ಚಲಿಸಿ ಪೋಟ್ಬ್ರ್ಲೇರ್ ನಿಂದ 460 ಕಿಲೋಮೀಟರ್ ದೂರದಲ್ಲಿ ಕೇಂದ್ರಿತವಾಗಿದೆ. ಆಂಧ್ರ ಕರಾವಳಿಯಲ್ಲಿ ಒಡಿಶಾದಲ್ಲಿ 90 ರಿಂದ 100 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಸಂಭಾವ್ಯ ಒಕ್ಕಲೆಬ್ಬಿಸುವಿಕೆಗಾಗಿ ತಾತ್ಕಾಲಿಕ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಚಂಡಮಾರುತಕ್ಕೆ ತುತ್ತಾಗುವ 15 ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ರಜೆಯನ್ನು ರದ್ದುಪಡಿಸಲಾಗಿದೆ ಎಂದು ಕಂದಾಯ ಮತ್ತು ವಿಕೋಪ ನಿರ್ವಹಣೆ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ. ಅ.28 ಮತ್ತು 29ರಂದು ಈ ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Tags:
error: Content is protected !!