ದೇಶ- ವಿದೇಶ

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್ ಪಿಜಿ ದರ ಹೆಚ್ಚಳ ಕಂಡಿದೆ. ಇಂದು ಬರೋಬ್ಬರಿ 29 ರೂಪಾಯಿ ಏರಿಕೆಯಾಗಿದೆ. ಒಟ್ಟಿನಲ್ಲಿ 14.2 ಕೆಜಿ ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ದರ 913 ರಿಂದ 942 ಕ್ಕೆ ಏರಿಕೆ ಆಗಿದೆ. ಈ ದರ ಜೂನ್ 7, ಅಂದರೆ ಇಂದಿನಿಂದಲೇ ಜಾರಿಯಾಗಲಿದೆ.

ಜಾಗತಿಕ ತೈಲ ಹಾಗೂ ಇಂಧನಗಳ ಪೂರೈಕೆಯಲ್ಲಿ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಬೆಲೆ ಏರಿಕೆ ಆಗಿದೆ. ಈ ಬೆಲೆ ಏರಿಕೆಯು ನಗರದಿಂದ ನಗರಕ್ಕೆ ಹೊಸ ದರದಲ್ಲಿ ವ್ಯತ್ಯಾಸ ಇರಲಿದೆ. ಈ ಹಿಂದೆ ಮಾರ್ಚ್ 7 ರಂದು ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದ ನಂತರ, ಈಗ ಎರಡನೇ ಬಾರಿಗೆ 29 ರೂ ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳವು ದೇಶೀಯ ಎಲ್ ಪಿಜಿ ಮಾರಾಟದ ಮೇಲಿನ ನಷ್ಟವನ್ನು ಭಾಗಶಃ ಸರಿದೂಗಿಸಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ವಾಣಿಜ್ಯ ಸಿಲಿಂಡರ್ ಅಂತೂ ಈ ಹಿಂದೆಯೇ ಭಾರಿ ಬೆಲೆ ಏರಿಕೆಯಿಂದ ದುಬಾರಿಯಾಗಿದೆ. ಲಭ್ಯತೆ ಕೊರತೆಯಿಂದಲೂ ಅನಧಿಖೃತವಾಗಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿವೆ, ಹೋಟೆಲ್ ಗಳ ತಿಂಡಿ- ಊಟದ ದರವೂ ಗಗನಕ್ಕೆ ಏರಿದೆ. ಹೋಟೆಲ್ ಉದ್ಯಮಿಗಳು ನಷ್ಟ ತಪ್ಪಿಸಲು ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕುತ್ತಿದ್ದಾರೆ. ಮದ್ಯಪ್ರಾಚ್ಯ ಬಿಕ್ಕಟ್ಟು ರಿ ಹೊಗುವವರೆಗೂ ಈ ಬೆಲೆ ಏರಿಕೆಯ ಬಿಸಿ ಹೀಗೆ ಮುಂದುವರಿಯುವ ಸಾಧ್ಯತೆ ಇದೆ.
ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಎಲ್ ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಗುರುವಾರ ತಿಳಿಸಿದ್ದರು. ಅಲ್ಲದೆ ಗೃಹಬಳಕೆಯ ಸಿಲಿಂಡರ್ ಮೇಲಿನ ಅಂಡರ್ ರಿಕವರಿ ಅಂದರೆ ನಷ್ಟ ಸರಿದೂಗಿಸುವ ಭರ್ತಿ ವೆಚ್ಚ, ಇಂದಿಗೂ ಲ್ರತಿ ಸಿಲಿಂಡರ್ ಗೆ ಸುಮಾರು 700 ರೂಪಾಯಿ ಆಸುಪಾಸಿನಲ್ಲೇ ಇದೆ ಎಂದಿದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago