ದೇಶ- ವಿದೇಶ

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು ಸಿಲಿಂಡರ್‌ ಖರೀದಿಯಲ್ಲಿ ಸಮರ್ಪಕ ಪೂರೈಕೆ ಇರುವುದಾಗಿ   ಬುಧವಾರ ತಿಳಿಸಿದೆ.

ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡುವ ವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಚ್ಚಾ ತೈಲವನ್ನು ಹೊರ್ಮುಜ್‌ ಜಲಸಂಧಿ ಬಳಸದ ಮೂಲಗಳಿಂದ ತರಿಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೇಶವು ತನ್ನ LPG ಉತ್ಪಾದನೆ ಹೆಚ್ಚಿಸುವ ಮತ್ತು ಮನೆಬಳಕೆಗೆ ಆದ್ಯತೆಯೊಂದಿಗೆ ವಿತರಣೆ ಮಾಡಿಸುವ ಕ್ರಮಗಳನ್ನು ಕೈಗೊಂಡಿದ್ದು, ಆಸ್ಪತ್ರೆಗಳು ಮತ್ತು ಶಾಲೆಗಳಂತಹ ಅಗತ್ಯ ಸೇವೆಗಳಿಗೆ ಸಹ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲ ತಪ್ಪು ಮಾಹಿತಿಯ ಕಾರಣದಿಂದಾಗಿ ಕೆಲವರು ಭೀತಿಗೆ ಒಳಗಾಗಿ ಎಲ್‌ಪಿಜಿ ಸಿಲಿಂಡರ್‌ ಖರೀದಿಗೆ ಮುಂದಾಗಿದ್ದಾರೆ ಎಂಬುದು ಗೊತ್ತಾಗಿದೆ. ಆದರೆ ಗ್ರಾಹಕರು ಭೀತಿಗೆ ಒಳಗಾಗಿ ಸಿಲಿಂಡರ್‌ ಬುಕ್‌ ಮಾಡಬೇಕಾದ ಪರಿಸ್ಥಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಭಾರತವು ಸುಮಾರು 40 ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ನಮಗೆ ಪ್ರತಿದಿನ 55 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಬೇಕು. ಇದನ್ನು ವಿವಿಧ ಮೂಲಗಳಿಂದ ಪಡೆಯುತ್ತಿದ್ದೇವೆ. ಜೊತೆಗೆ ಹೊರ್ಮುಜ್‌ ಜಲಸಂಧಿಯ ಮೂಲಕ ಬರಬಹುದಾಗಿದ್ದ ಕಚ್ಚ ತೈಲದ ಪ್ರಮಾಣವೂ ಕೂಡ ಹೆಚ್ಚಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎಲ್‌ಎನ್‌ಜಿ ಹೊತ್ತ ಎರಡು ಹಡಗುಗಳು ಕೆಲವೇ ದಿನಗಳಲ್ಲಿ ಭಾರತ ತಲುಪಲಿವೆ, ಆಗ ದೇಶದಲ್ಲಿ ಇಂಧನ ಪೂರೈಕೆಯು ಇನ್ನಷ್ಟು ಸುಧಾರಿಸಲಿದೆ ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

1 hour ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

2 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

2 hours ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

2 hours ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

2 hours ago