LPG cylinder price reduction for commercial use
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ವಿಶ್ವದಲ್ಲಿ ಅತ್ಯಂತ ಕಡಿಮೆ ದರಗಳಲ್ಲೇ ಉಳಿದಿವೆ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ.
14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 29 ಹೆಚ್ಚಿಸಿ, ದಿಲ್ಲಿಯಲ್ಲಿ ಅದರ ಚಿಲ್ಲರೆ ದರವನ್ನು 913ರಿಂದ 942ಕ್ಕೆ ಏರಿಕೆಯಾಗಿದ್ದು ಸರ್ಕಾರ ಈ ಸ್ಪಷ್ಟನೆ ನೀಡಿದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳು ಮೊದಲ ನಾಲ್ಕು ಸಿಲಿಂಡರ್‌ಗಳ ಮರುಪೂರೈಕೆಗೆ ಪ್ರತಿ ಸಿಲಿಂಡರ್‌ಗೆ 300 ರೂಪಾಯಿ ಸಬ್ಸಿಡಿ ಪಡೆಯುವುದರಿಂದ, ಅವರಿಗೆ ಪ್ರತಿ ಸಿಲಿಂಡರ್‌ನ ಪರಿಣಾಮಕಾರಿ ಬೆಲೆ 642 ರೂಪಾಯಿ ಆಗಿಯೇ ಮುಂದುವರಿಯಲಿದೆ.
ಸರ್ಕಾರದ ಪ್ರಕಾರ, ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಜಾಗತಿಕ ಪೂರೈಕೆ ವ್ಯತ್ಯಯಗಳಿಂದಾಗಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಒದಗಿಸುವ ವೆಚ್ಚ 1600 ರೂಪಾಯಿಗೂ ಹೆಚ್ಚು ಏರಿಕೆಯಾಗಿದೆ.
ಸರ್ಕಾರದ ಹೇಳಿಕೆಯಂತೆ, ಫೆಬ್ರವರಿಯಲ್ಲಿ ಟನ್‌ಗೆ ಸುಮಾರು 543 ಡಾಲರ್ ಇದ್ದ ಎಲ್‌ಪಿಜಿ ದರ, ಹಾರ್ಮುಜ್ ಜಲಸಂಧಿಯಲ್ಲಿನ ವ್ಯತ್ಯಯಗಳ ನಂತರ ಏಪ್ರಿಲ್‌ನಲ್ಲಿ ಟನ್‌ಗೆ 775 ಡಾಲರ್ಗೆ ಏರಿತು. ಜೂನ್ ವೇಳೆಗೆ ಅದು ಮತ್ತಷ್ಟು ಏರಿಕೆ ಕಂಡು ಟನ್ಗೆ 790 ಡಾಲರ್ ತಲುಪಿದೆ.
ಸರ್ಕಾರವು, ಭಾರತದಲ್ಲಿ ಅಡುಗೆ ಅನಿಲದ ಬೆಲೆಗಳು ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ ಮತ್ತು ಶ್ರೀಲಂಕಾದಂತಹ ನೆರೆಯ ರಾಷ್ಟ್ರಗಳಿಗಿಂತಲೂ ಕಡಿಮೆಯಿದ್ದು, ಅಮೆರಿಕ, ಆಸ್ಟ್ರೇಲಿಯಾ ಹಾಗೂ ಕೆನಡಾದಂತಹ ಅಭಿವೃದ್ಧಿ ಹೊಂದಿದ ದೇಶಗಳಿಗಿಂತಲೂ ಗಣನೀಯವಾಗಿ ಕಡಿಮೆ ಎಂದು ಕೇಂದ್ರ ಸರ್ಕಾರ ಸಮರ್ಥನೆ ನೀಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…