Mysore
21
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಟುತ್ತಿರುವ ವರದಿಗಳನ್ನು ನಿರಾಕರಿಸಿದೆ.

ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬುಧವಾರ ಸ್ಪಷ್ಟಪಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಪರಿಷ್ಕೃತ ನಿಯಮಗಳು ಎಂಬ ತಪ್ಪು ವರದಿಗಳನ್ನು ಸರ್ಕಾರ ತಳ್ಳಿಹಾಕಿದೆ.

ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯ, ಸಿಲಿಂಡರ್‌ ರಿಫಿಲಿಂಗ್‌ ಅವಧಿಯನ್ನು 25 ರಿಂದ 35 ದಿನಗಳವರೆಗೆ ಹೆಚ್ಚಿಸಲಾಗಿದೆ ಎಂಬುದು ಸುಳ್ಳು ವರದಿ. ನಗರ ಪ್ರದೇಶಗಳಲ್ಲಿ ಒಂದು ಸಿಲಿಂಡರ್‌ ಖರೀದಿಸಿದ 25 ದಿನಗಳ ನಂತರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳ ನಂತರ ಮತೊಂದು ಸಿಲಿಂಡರ್‌ ಪಡೆಯಬಹುದು ಎಂದು ತಿಳಿಸಿದೆ.

ಇನ್ನೂ ದೇಶದಲ್ಲಿ ಎಲ್‌ಪಿಜಿ ಸಾಕಷ್ಟು ದಾಸ್ತಾನು ಲಭ್ಯವಿದೆ. ಆದ್ದರಿಂದ ಗ್ರಾಹಕರು ಅನಗತ್ಯವಾಗಿ ಅಥವಾ ಭಯಭೀತರಾಗಿ ಸಿಲಿಂಡರ್‌ಗಳನ್ನು ಬುಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವಾಲಯ ಒತ್ತಿ ಹೇಳಿದ್ದು, “ಆತಂಕಕ್ಕೆ ಯಾವುದೇ ಕಾರಣವಿಲ್ಲ. ಸಾಮಾನ್ಯವಾಗಿ ಬುಕಿಂಗ್ ಮಾಡಿ” ಎಂದು ಸಲಹೆ ನೀಡಿದೆ.

Tags:
error: Content is protected !!