ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಟುತ್ತಿರುವ ವರದಿಗಳನ್ನು ನಿರಾಕರಿಸಿದೆ.
ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬುಧವಾರ ಸ್ಪಷ್ಟಪಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಪರಿಷ್ಕೃತ ನಿಯಮಗಳು ಎಂಬ ತಪ್ಪು ವರದಿಗಳನ್ನು ಸರ್ಕಾರ ತಳ್ಳಿಹಾಕಿದೆ.
ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯ, ಸಿಲಿಂಡರ್ ರಿಫಿಲಿಂಗ್ ಅವಧಿಯನ್ನು 25 ರಿಂದ 35 ದಿನಗಳವರೆಗೆ ಹೆಚ್ಚಿಸಲಾಗಿದೆ ಎಂಬುದು ಸುಳ್ಳು ವರದಿ. ನಗರ ಪ್ರದೇಶಗಳಲ್ಲಿ ಒಂದು ಸಿಲಿಂಡರ್ ಖರೀದಿಸಿದ 25 ದಿನಗಳ ನಂತರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳ ನಂತರ ಮತೊಂದು ಸಿಲಿಂಡರ್ ಪಡೆಯಬಹುದು ಎಂದು ತಿಳಿಸಿದೆ.
ಇನ್ನೂ ದೇಶದಲ್ಲಿ ಎಲ್‌ಪಿಜಿ ಸಾಕಷ್ಟು ದಾಸ್ತಾನು ಲಭ್ಯವಿದೆ. ಆದ್ದರಿಂದ ಗ್ರಾಹಕರು ಅನಗತ್ಯವಾಗಿ ಅಥವಾ ಭಯಭೀತರಾಗಿ ಸಿಲಿಂಡರ್‌ಗಳನ್ನು ಬುಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವಾಲಯ ಒತ್ತಿ ಹೇಳಿದ್ದು, “ಆತಂಕಕ್ಕೆ ಯಾವುದೇ ಕಾರಣವಿಲ್ಲ. ಸಾಮಾನ್ಯವಾಗಿ ಬುಕಿಂಗ್ ಮಾಡಿ” ಎಂದು ಸಲಹೆ ನೀಡಿದೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…