Mysore
28
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

 ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ ರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.

ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು ಬೆಳಗಿನ ಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಇಂದು ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮುಂದಿನ ತಿಂಗಳ ಫೆಬ್ರವರಿ.26ರ ಮಹಾ ಶಿವರಾತ್ರಿಯವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಈ ಕುಂಭಮೇಳದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.

ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದ್ದು, ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತರಕ ಘಟನೆ ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.

ನದಿಯ ಉದ್ದಕ್ಕೂ 12 ಕಿ.ಮೀ ಘಾಟ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಎನ್‌ಡಿಆರ್‌ಎಫ್‌ ಪಡೆಯಿಂದ ನೀರಿನ ಮೇಲೆ ಆಂಬುಲೆನ್ಸ್‌ ನಿರ್ಮಾಣ ಮಾಡಲಾಗಿದೆ.

ಇನ್ನು ನದಿಯಲ್ಲಿ ಪುಣ್ಯಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್‌ಟೇಬಲ್‌, 150 ಎಸ್‌ಡಿಆರ್‌ಎಫ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

 

Tags:
error: Content is protected !!