ದೇಶ- ವಿದೇಶ

ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ: ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಲ್ತುಳಿತ ಪ್ರಕರಣದಲ್ಲಿ 1000 ಜನ ಸಾವನ್ನಪ್ಪಿದ್ದಾರೆ ಎಂದು ನಾನು ಹೇಳಿದ್ದೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ಸಾವಿನ ಸಂಖ್ಯೆಯ ಬಗ್ಗೆ ನಿಖರವಾದ ವರದಿಯನ್ನು ಬಿಡುಗಡೆ ಮಾಡಲಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಭಾಷಣಕ್ಕೂ ಮೊದಲಿಗೆ ಜನವರಿ.29ರಂದು ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಡಿದ ಸಾವಿರಾರು ಜನರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದರು. ಈ ವೇಳೆ ಸಭಾಪತಿ ಜಗದೀಪ್‌ ಧನಕರ್‌ ಅವರು ಈ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದರು.

ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಜನರು ಸಾವನ್ನಪ್ಪಿದ್ದಾರೆ. ಒಂದು ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದೇವೆ. ನಾನು ಹೇಳುವುದು ತಪ್ಪಾದರೆ ಸಾವಿನ ಸಂಖ್ಯೆಯ ಬಗ್ಗೆ ನಿಖರವಾದ ವರದಿ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

2 hours ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

2 hours ago

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…

2 hours ago

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…

2 hours ago

ಜಯಪುರ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆ

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…

2 hours ago

ಮೂಲಸೌಲಭ್ಯ ವಂಚಿತ ಯಳಂದೂರು ಸಂತೆ ಮೈದಾನ

ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…

3 hours ago