ದೇಶ- ವಿದೇಶ

ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ಭಾರತೀಯ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಪಾಲಿಸುವವರಿಗೆ ಇದು ಬಹಳ ವಿಶೇಷವಾದ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಲಕ್ಷಾಂತರ ನಾಗ ಸಾಧುಗಳು ಶಾಹಿ ಸ್ನಾನ ಮಾಡುವ ಮೂಲಕ ಕುಂಭಮೇಳಕ್ಕೆ ಚಾಲನೆ ನೀಡಿದ್ದಾರೆ.

ಮುಂದಿನ ತಿಂಗಳ ಫೆಬ್ರವರಿ.26ರವರೆಗೂ ಮಹಾಕುಂಭ ಮೇಳೆ ನಡೆಯಲಿದ್ದು, 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯಸ್ನಾನ ನಡೆಯಲಿದ್ದು, ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಾಂತರ ಜನರಿಗೆ ಇದು ಬಹಳ ವಿಶೇಷವಾದ ದಿನ. ಮಹಾಕುಂಭ ಮೇಳ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಿದ್ದು, ನಂಬಿಕೆ, ಭಕ್ತಿ ಮತ್ತು ಸಂಸ್ಕೃತಿಯ ಪವಿತ್ರ ಸಂಗಮದಲ್ಲಿ ಅಸಂಖ್ಯಾತ ಜನರನ್ನು ಒಟ್ಟುಗೂಡಿಸುತ್ತದೆ. ಮಹಾಕುಂಭವು ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಸಾಕಾರಗೊಳಿಸುತ್ತದೆ. ನಂಬಿಕೆ ಮತ್ಯು ಸಾಮರಸ್ಯವನ್ನು ಎತ್ತಿ ಹಿಡಿಯುತ್ತದೆ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್‌ ಮಾಡಿರುವ ಅವರು ಪವಿತ್ರ ಸ್ನಾನ ಮಾಡಿ ಆಶೀರ್ವಾದ ಪಡೆಯಲು ಅಸಂಖ್ಯಾತ ಜನರು ಪ್ರಯಾಗ್‌ರಾಜ್‌ಗೆ ಬರುತ್ತಿರುವುದನ್ನು ನೋಡಿ ನನಗರ ಸಂತೋಷವಾಗಿದೆ. ಎಲ್ಲಾ ಯಾತ್ರಿಕರು ಮತ್ತು ಪ್ರವಾಸಿಗರಿಗೆ ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

13 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

13 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

19 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

19 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

20 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

20 hours ago