Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಹಾರಾಷ್ಟ್ರ: ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್‌ ನಾಳೆ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಿರಿಯ ಬಿಜೆಪಿ ನಾಯಕ ದೇವೇಂದ್ರ ಪಡ್ನವೀಸ್‌ ಅವರು ನಾಳೆ(ಡಿ.5) ಅಧಿಕೃತವಾಗಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಿಸಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಇಂದು(ಡಿ.4) ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ದೇವೇಂದ್ರ ಪಡ್ನವೀಸ್‌ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ(ಡಿ.5) ದೇವೇಂದ್ರ ಪಡ್ನವೀಸ್‌ ಅವರು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರದ ಶಾಸಕಾಂಗ ಪಕ್ಷದ ಸಭೆ ಇಂದು ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಹಾಗು ಗುಜರಾತ್ನ ಮಾಜಿ ಸಿಎಂ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು. ಹೀಗಾಗಿ ಮಹಾರಾಷ್ಟ್ರದಲ್ಲಿ ಚುನಾವಣೆ ಫಲಿತಾಂಸ ಬಂದ 12 ದಿನಗಳ ನಂತರ ದೇವೇಂದ್ರ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ.

ಈ ಹಿನ್ನೆಲೆ ಇಂದು ಮಧ್ಯಾಹ್ನ 3.30 ಗಂಟೆ ವೇಳೆಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿ ಮಾಡಿ ಮಹಾಯುತಿ ಮೈತ್ರಿಕೂಟವು ಸರ್ಖಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್‌ ಮುಂಗಂಟಿವಾರ್‌ ಹೇಳಿದ್ದಾರೆ.

Tags: