ದೇಶ- ವಿದೇಶ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಶನಿವಾರ ಸಂಜೆ 5 ಗಂಟೆಗೆ ಮುಂಬೈನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ ಅವರು ಸುನೇತ್ರಾ ಪವಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಮಹಾರಾಷ್ಟ್ರದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ನಾಯಕಿಯೊಬ್ಬರು ಉಪಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದಾರೆ.

ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಮೃತಪಟ್ಟ ನಂತರ ಉಂಟಾದ ರಾಜಕೀಯ ಶೂನ್ಯತೆಯನ್ನು ತುಂಬಲು ಎನ್‌ಸಿಪಿ ತ್ವರಿತ ನಿರ್ಣಯ ಕೈಗೊಂಡಿತು. ಮಧ್ಯಾಹ್ನ 2 ಗಂಟೆಗೆ ವಿಧಾನಭವನದಲ್ಲಿ ನಡೆದ ಎನ್‌ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಏಕಮತದಿಂದ ಪಕ್ಷದ ಶಾಸಕಾಂಗ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಛಗನ್ ಭುಜಬಲ್ ಅವರು ಪ್ರಸ್ತಾಪಿಸಿ, ಇತರ ಹಿರಿಯ ನಾಯಕರು ಬೆಂಬಲಿಸಿದರು.

ಸುನೇತ್ರಾ ಪವಾರ್ ಅವರು ಈ ಹಿಂದೆ 2024ರ ಜೂನ್‌ನಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ ಉಪಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾದ ನಂತರ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಪ್ರಮಾಣ ವಚನದ ನಂತರ 6 ತಿಂಗಳೊಳಗಾಗಿ ಅವರು ಮಹಾರಾಷ್ಟ್ರ ವಿಧಾನಸಭೆ ಅಥವಾ ವಿಧಾನ ಪರಿಷತ್ತಿಗೆ ಆಯ್ಕೆಯಾಗಬೇಕು. ಬಾರಾಮತಿ ಕ್ಷೇತ್ರದ ಉಪಚುನಾವಣೆಯೂ ಇದಕ್ಕೆ ಸಂಬಂಧಿಸಿದಂತೆ ಚರ್ಚೆಯಾಗುತ್ತಿದೆ.

ಈ ನಿರ್ಣಯಕ್ಕೆ ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆಯಿಂದ ಬೆಂಬಲ ವ್ಯಕ್ತವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಹ ಸಮ್ಮತಿ ಸೂಚಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾದಲ್ಲಿ ಪ್ಲೇಗ್ ಪತ್ತೆಯಾಗಿಲ್ಲ: WHO ಸ್ಪಷ್ಟನೆ!

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…

17 hours ago

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…

17 hours ago

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…

17 hours ago

ಮೈಸೂರು ದಸರಾ: ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…

17 hours ago

ಓದುಗರ ಪತ್ರ: ‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ

‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…

17 hours ago

ಓದುಗರ ಪತ್ರ: ನೀಲಿಯೆಂದರೇನು?!

ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…

17 hours ago