ನವದೆಹಲಿ: ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಮಹಾಯುತಿಯು ಅಭೂತಪೂರ್ವ ವಿಜಯವನ್ನು ದಾಖಲಿಸಿದೆ.
ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮಹಾರಾಷ್ಟ್ರ ಚುನಾವಣೆಯ ಗೆಲುವನ್ನು ಸತ್ಯ ಮತ್ತು ಸಾಮಾಜಿಕ ನ್ಯಾಯದ ಗೆಲುವು ಎಂದು ಬಣ್ಣಿಸಿ, ಗೆಲುವಿಗಾಗಿ ಶ್ರಮಿಸಿದ ಮಹಾಯುತಿ ನಾಯಕರನ್ನು ಶ್ಲಾಘಿಸಿದರು.
ಐತಿಹಾಸಿಕ ಗೆಲುವಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯು ಕಳೆದ 50 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ತನ್ನ ಅತಿದೊಡ್ಡ ಗೆಲುವನ್ನು ಪಡೆದುಕೊಂಡಿದೆ. ಇದು ಬಿಜೆಪಿಗೆ ಸತತ ಮೂರನೇ ಬಾರಿಗೆ ದೊಡ್ಡ ಜಯವಾಗಿದೆ. ರಾಜ್ಯದಲ್ಲಿ ಪಕ್ಷವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಪಕ್ಷದ ದೃಷ್ಟಿಕೋನಕ್ಕೆ ಹೆಚ್ಚುತ್ತಿರುವ ಬೆಂಬಲಕ್ಕೆ ಸಾಕ್ಷಿಯಾಗಿದೆ. ಮಹಾರಾಷ್ಟ್ರವು ಎನ್‌ಡಿಎಗೆ ಸತತ ಮೂರನೇ ಅವಧಿಯನ್ನು ನೀಡುವ ಆರನೇ ರಾಜ್ಯವಾಗಿವೆ. ಇದು ದೇಶದಲ್ಲಿ ಮೈತ್ರಿಯ ಪ್ರಾಬಲ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು.
ಮಹಾರಾಷ್ಟ್ರದ ಜನರು ಮಹಾ ವಿಕಾಸ್ ಆಘಾಡಿಯನ್ನು ಸೋಲಿಸುವ ಮೂಲಕ ನಕಾರಾತ್ಮಕ ರಾಜಕೀಯ ಹಾಗೂ ಪರಿವಾರ ವಾದವನ್ನು ಸೋಲಿಸಿದ್ದಾರೆ. ಅದರೊಂದಿಗೆ ಇಂದು ಮಹಾರಾಷ್ಟ್ರವು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಬಲಪಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…