ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.
ವಿಧಾನಸಭಾ ಕ್ಷೇತ್ರಗಳ ಜೊತೆಗೆ ಮಹಾರಾಷ್ಟ್ರದಲ್ಲಿ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುತ್ತಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ನಡುವಿನ ಒಡಕು ನಂತರ ಒಟ್ಟು 158 ಪಕ್ಷಗಳು ಚುನಾವಣಾ ಕಣದಲ್ಲಿವೆ.
ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರವರೆಗೆ ನಡೆಯಲಿದೆ. ನವೆಂಬರ್.23ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.