Mysore
24
scattered clouds

Social Media

ಮಂಗಳವಾರ, 03 ಡಿಸೆಂಬರ್ 2024
Light
Dark

ಮಹಾರಾಷ್ಟ್ರ ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್‌ ಮೊದಲಿಗ

ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿ, ಭರ್ಜರಿ ಗೆಲುವು ಸಾಧಿಸಿದೆ.

ಬಿಜೆಪಿ ಪ್ರಚಂಡ ಗೆಲುವಿನಿಂದ ಏಕನಾಥ್‌ ಶಿಂಧೆ ಸಿಎಂ ಪಟ್ಟದ ಆಸೆಗೆ ತಣ್ಣೀರೆರಚಿದಂತಾಗಿದೆ. ಬೇರೆ ಪಕ್ಷದವರು ಸಿಎಂ ಆಗುವ ಸಾಧ್ಯತೆ ಕ್ಷೀಣಿಸಿದೆ.

ಸಿಂಗಲ್‌ ಪಕ್ಷವಾಗಿ ಬಹುಮತಕ್ಕೆ ಬಿಜೆಪಿಗೆ ಕೇವಲ 12 ಸ್ಥಾನಗಳ ಕೊರತೆಯಿದ್ದು, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಮುಖ್ಯಮಂತ್ರಿ ರೇಸ್‌ನಲ್ಲಿ ಮೊದಲಿಗರಾಗಿದ್ದಾರೆ. ಅವರೇ ಬಹುತೇಕ ಮಹಾರಾಷ್ಟ್ರ ಸಿಎಂ ಆಗುವ ಸಾಧ್ಯತೆ ದಟ್ಟವಾಗಿದೆ.

ಇನ್ನು ಶಿವಸೇನೆಯ ಏಕನಾಥ್‌ ಶಿಂಧೆ ಅವರು ಕೂಡ ಮತ್ತೆ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟಿದ್ದು, ಹೆಚ್ಚು ಸ್ಥಾನ ಪಡೆದ ಪಕ್ಷದವರೇ ಸಿಎಂ ಆಗಬೇಕು ಎಂದೇನಿಲ್ಲ ಎಂದು ಹೇಳಿದ್ದಾರೆ.

ಬಹುತೇಕ ಇಂದೇ ಸಿಎಂ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ದೇವೇಂದ್ರ ಫಡ್ನವೀಸ್‌ ಹೆಸರೇ ಅಂತಿಮವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

 

Tags: