ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿ, ಭರ್ಜರಿ ಗೆಲುವು ಸಾಧಿಸಿದೆ.
ಬಿಜೆಪಿ ಪ್ರಚಂಡ ಗೆಲುವಿನಿಂದ ಏಕನಾಥ್ ಶಿಂಧೆ ಸಿಎಂ ಪಟ್ಟದ ಆಸೆಗೆ ತಣ್ಣೀರೆರಚಿದಂತಾಗಿದೆ. ಬೇರೆ ಪಕ್ಷದವರು ಸಿಎಂ ಆಗುವ ಸಾಧ್ಯತೆ ಕ್ಷೀಣಿಸಿದೆ.
ಸಿಂಗಲ್ ಪಕ್ಷವಾಗಿ ಬಹುಮತಕ್ಕೆ ಬಿಜೆಪಿಗೆ ಕೇವಲ 12 ಸ್ಥಾನಗಳ ಕೊರತೆಯಿದ್ದು, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ರೇಸ್‌ನಲ್ಲಿ ಮೊದಲಿಗರಾಗಿದ್ದಾರೆ. ಅವರೇ ಬಹುತೇಕ ಮಹಾರಾಷ್ಟ್ರ ಸಿಎಂ ಆಗುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಶಿವಸೇನೆಯ ಏಕನಾಥ್ ಶಿಂಧೆ ಅವರು ಕೂಡ ಮತ್ತೆ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟಿದ್ದು, ಹೆಚ್ಚು ಸ್ಥಾನ ಪಡೆದ ಪಕ್ಷದವರೇ ಸಿಎಂ ಆಗಬೇಕು ಎಂದೇನಿಲ್ಲ ಎಂದು ಹೇಳಿದ್ದಾರೆ.
ಬಹುತೇಕ ಇಂದೇ ಸಿಎಂ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ದೇವೇಂದ್ರ ಫಡ್ನವೀಸ್ ಹೆಸರೇ ಅಂತಿಮವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…
ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…