ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ನೆರವೇರಿತು.
ಅಜಿತ್ ಪವಾರ್ ಅವರ ಪುತ್ರರಾದ ಪಾರ್ಥ ಪವಾರ್, ಜೈ ಪವಾರ್ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ನಿತಿನ್ ಗಡ್ಕರಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಸೇರಿದಂತೆ ಹಲವು ಗಣ್ಯಾತಿಗಣ್ಯರು, ಸಾವಿರಾರು ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಭಾಗಿಯಾಗಿದ್ದರು.





