ದೇಶ- ವಿದೇಶ

ಜನತೆಗೆ ಭರ್ಜರಿ ಗಿಫ್ಟ್‌ ನೀಡಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್‌ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಜನಪ್ರಿಯ ಸ್ಕೀಮ್‌ಗಳಿಗೆ ಶರಣಾಗಿದೆ.

ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1500 ರೂ ನೀಡುವುದಾಗಿ ಡಿಸಿಎಂ ಅಜಿತ್‌ ಪವಾರ್‌ ತಮ್ಮ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಇದೇ ಅಕ್ಟೋಬರ್ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಯಿದ್ದು, ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್‌ಗಳನ್ನು ಘೋಷಿಸಲಾಗಿದೆ.

ಸಿಎಂ ಅನ್ನಪೂರ್ಣ ಯೋಜನೆಯಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್‌ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ 5 ಸಾವಿರ ಬೋನಸ್‌ ಹಣವನ್ನು ಕೊಡಲಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ಜುಲೈ.1ರ ಬಳಿಕ ಪ್ರತಿ ಲೀಟರ್‌ ಹಾಲಿಗೆ 5ರೂ ಹೆಚ್ಚುವರಿ ಬೋನಸ್‌ ಕೊಡಲಾಗುತ್ತದೆ. ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷದಿಂದ 25 ಲಕ್ಷ ರೂಗೆ ಏರಿಸಲಾಗಿದೆ. ಇನ್ನೂ ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

42 seconds ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

6 hours ago