ದೇಶ- ವಿದೇಶ

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ಸಮನ ಸಲ್ಲಿಸಿದ್ದಾರೆ.

ದಿಲ್ಲಿಯ ರಾಜ್‌ಘಟ್‌ನಲ್ಲಿನ ಗಾಂಧಿ ಅವರ ಸ್ಮಾರಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ರಾಧಾಕೃಷ್ಣನ್‌, ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಗಾಂಧಿ ಅವರ ಸ್ವದೇಶಿ ಕರೆಯು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮೂಲಭೂತ ತತ್ವವಾಗಿದೆ. ಇದು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತಕ್ಕಾಗಿ ಸರ್ಕಾರದ ಸಂಕಲ್ಪದ ಮೂಲಭೂತ ಆಧಾರ ಸ್ತಂಭವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ನನ್ನ ಗೌರವಗಳು. ಅವರ ವ್ಯಕ್ತಿತ್ವ ಮತ್ತು ಕಾರ್ಯಗಳು ದೇಶದ ಜನರನ್ನು ಕರ್ತವ್ಯದ ಹಾದಿಯಲ್ಲಿ ನಡೆಯಲು ಸದಾ ಪ್ರೇರೇಪಿಸುತ್ತಲೇ ಇರುತ್ತವೆ ಎಂದಿದ್ದಾರೆ.

ಮತ್ತೊಂದು ಪೋಸ್ಟ್​ನಲ್ಲಿ, ಅಹಿಂಸೆಯ ತತ್ವವನ್ನು ಶ್ಲಾಘಿಸಿರುವ ಮೋದಿ, ಬಾಪು ಯಾವಾಗಲೂ ಮಾನವೀಯತೆಯ ರಕ್ಷಣೆಗಾಗಿ ಅಹಿಂಸೆಯನ್ನು ಒತ್ತಿ ಹೇಳುತ್ತಿದ್ದರು. ಶಸ್ತ್ರಾಸ್ತ್ರವಿಲ್ಲದೆ ಜಗತ್ತನ್ನು ಬದಲಾಯಿಸಬಲ್ಲ ಶಕ್ತಿ ಅದರಲ್ಲಿದೆ. ಅಹಿಂಸಾ ಪರಮ ಧರ್ಮಸ್ತ-ಥಾಹಿಂಸಾ ಪರಂತಪಃ, ಅಹಿಂಸಾ ಪರಮಂ ಸತ್ಯಂ ಯತೋ ಧರ್ಮಃ ಪ್ರವರ್ತತೇ (ಅಹಿಂಸೆಯೇ ಅಂತಿಮ ಕರ್ತವ್ಯ, ಅಹಿಂಸೆಯೇ ಅಂತಿಮ ತಪಸ್ಸು. ಅಹಿಂಸೆಯೇ ಅಂತಿಮ ಸತ್ಯ, ಮತ್ತು ಅದು ಸದಾಚಾರದ ಉದ್ದೇಶವನ್ನು ಮುನ್ನಡೆಸುತ್ತದೆ) ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧಿಯವರ ಸ್ಮರಣೆ ಮಾಡಿದ್ದು, ದೇಶವನ್ನು ಬೇರ್ಪಡಿಸಿದ ದ್ವೇಷವನ್ನು ಗಾಂಧಿಯವರ ಮಾರ್ಗದಲ್ಲಿ ಮಾತ್ರ ಎದುರಿಸಲು ಸಾಧ್ಯ. ಬಾಪು ಅವರ ಸ್ವಂತ ಮಾರ್ಗ, ಸತ್ಯದ ಬೆಳಕು, ಅಹಿಂಸೆಯ ಶಕ್ತಿ ಮತ್ತು ಪ್ರೀತಿಯ ಕರುಣೆ ಇದರಲ್ಲೇ ಅಡಗಿದೆ. ಹುತಾತ್ಮರ ದಿನದಂದು ರಾಷ್ಟ್ರಪಿತನಿಗೆ ಗೌರವಗಳು ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ರಾಷ್ಟ್ರಪಿತನ ವಿಚಾರಗಳು ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ನಮನಗಳು ಎಂದಿದ್ದಾರೆ.

ರಾಷ್ಟ್ರಪತಿ ಮಹಾತ್ಮಗಾಂಧಿ ಅವರನ್ನು 1948ರ ಜನವರಿ 30ರಂದು ಹತ್ಯೆ ಮಾಡಲಾಯಿತು. ಅವರ ಪುಣ್ಯತಿಥಿಯನ್ನು ಪ್ರತಿ ವರ್ಷ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶಾದ್ಯಂತ ನಾಯಕರು ಮತ್ತು ನಾಗರಿಕರು ಅವರ ಶಾಂತಿ, ಏಕತೆ ಮತ್ತು ನೈತಿಕ ಧೈರ್ಯದ ಶಾಶ್ವತ ಪರಂಪರೆಗೆ ಗೌರವ ಸಲ್ಲಿಸುತ್ತಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

1 hour ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

5 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

5 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago