ದೇಶ- ವಿದೇಶ

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಬೆಳಿಗ್ಗೆ ರೈಲು ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಎಸಿ ಕೋಚ್‌ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಕ್ಷಣ ಬೆಂಕಿ ಹೊತ್ತಿಕೊಂಡಿದ್ದ ಬೋಗಿಯನ್ನು ಬೇರ್ಪಡಿಸಲಾಯಿತು ಮತ್ತು ಸುರಕ್ಷತೆಗಾಗಿ ಓವರ್‌ ಹೆಡ್‌ ವಿದ್ಯುತ್ ಸರಬರಾಜನ್ನು (ಒಹೆಚ್‌ಇ) ತಕ್ಷಣವೇ ಆಫ್ ಮಾಡಲಾಯಿತು. ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಕೋಟಾಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

12431 ರಾಜಧಾನಿ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಕೇರಳದ ತಿರುವನಂತಪುರಂನಿಂದ ಹೊರಟು ಇಂದು ಮಧ್ಯಾಹ್ನ 12:30ಕ್ಕೆ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣ ತಲುಪಬೇಕಿತ್ತು. ಬೆಂಕಿ ಕಾಣಿಸಿಕೊಂಡಾಗ ರೈಲು ಸುಮಾರು 2,600 ಕಿಲೋಮೀಟರ್ ಕ್ರಮಿಸಿತ್ತು. ದೆಹಲಿಗೆ ಸುಮಾರು 450 ಕಿಲೋಮೀಟರ್ ದೂರದಲ್ಲಿತ್ತು. ಬೆಂಕಿಯನ್ನು ತಕ್ಷಣವೇ ನಂದಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

3 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

3 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

4 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

4 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

5 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

11 hours ago