ದೇಶ- ವಿದೇಶ

ಭಾರತ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಯಶಸ್ಸು: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕಿ ಬಾತ್‌ನ 128ನೇ ಆವೃತ್ತಿಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.‌7ರಂದು ದೇಶಭಕ್ತಿ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಬಗ್ಗೆ ಮಾತನಾಡಿದರು. ಕೆಲವು ದಿನಗಳ ಹಿಂದೆ ಅವರು ಉದ್ಘಾಟಿಸಿದ ಸ್ಕೈರೂಟ್‌ನ್‌ ಇನ್ಪಿನಿಟಿ ಕ್ಯಾಂಪಸ್‌ನ ಮಹತ್ವ ತಿಳಿಸಿದರು.

ನವೆಂಬರ್.‌26ರಂದು ಸಂವಿಧಾನ ದಿನದಂದು ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅಯೋಧ್ಯೆಯ ರಾಮಮಂದಿರದ ಮೇಲೆ ಧಾರ್ಮಿಕ ಧ್ವಜವನ್ನು ಹಾರಿಸುವ ಬಗ್ಗೆಯೂ ಮೋದಿ ಮಾತನಾಡಿದರು.

ನವೆಂಬರ್ ತಿಂಗಳು ಬಹಳಷ್ಟು ಆಕಾಂಕ್ಷೆಗಳನ್ನು ತಂದಿದೆ. ಕೆಲವು ದಿನಗಳ ಹಿಂದೆ ನವೆಂಬರ್.‌26ರಂದು ಸಂವಿಧಾನ ದಿನದಂದು ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ವಂದೇ ಮಾತರಂನ 150ನೇ ವಾರ್ಷಿಕೋತ್ಸವದಂದು ದೇಶದಾದ್ಯಂತ ಕಾರ್ಯಕ್ರಮಗಳ ಭವ್ಯ ಸರಣಿ ಪ್ರಾರಂಭವಾಯಿತು. ನವೆಂಬರ್.‌25ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜವನ್ನು ಹಾರಿಸಲಾಯಿತು. ಅದೇ ದಿನ ಕುರುಕ್ಷೇತ್ರದ ಜ್ಯೋತಿಸರ್‌ನಲ್ಲಿ ಪಾಂಚಜನ್ಯ ಸ್ಮಾರಕವನ್ನು ಉದ್ಘಾಟಿಸಲಾಯಿತು ಎಂದು ಹೇಳಿದರು.

ಇನ್ನು ಭಾರತ ಬಾಹ್ಯಾಕಾಶ ಮತ್ತು ವಾಯುಯಾನ ಕ್ಷೇತ್ರದಲ್ಲಿ ಇಡುತ್ತಿರುವ ಹೆಜ್ಜೆಗಳ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ವಾಯುಯಾನ ವಲಯದಲ್ಲಿ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆಗಳಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. ಕಳೆದ ವಾರ, ಐಎನ್‌ಎಸ್‌ ಮಾಹೆಯನ್ನು ಮುಂಬೈನಲ್ಲಿ ಭಾರತೀಯ ನೌಕಾಪಡೆಗೆ ಸೇರಿಸಲಾಯಿತು. ಕಳೆದ ವಾರ ಸ್ಕೈರೂಟ್‌ನ ಇನ್ಪಿನಿಟಿ ಕ್ಯಾಂಪಸ್‌ನೊಂದಿಗೆ ಭಾರತದ ಬಾಹ್ಯಾಕಾಶ ಪರಿಸರ ವ್ಯವಸ್ಥೆಯು ಹೊಸ ಉತ್ತೇಜನವನ್ನು ಪಡೆಯಿತು. ಇದೆಲ್ಲವು ಭಾರತದ ಹೊಸ ಆಲೋಷಚನೆಗಳು, ನಾವೀನ್ಯತೆ ಮತ್ತು ಯುವ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಮೋದಿ ಹೇಳಿದ್ದಾರೆ.

ಕೃಷಿ ವಲಯವನ್ನು ಶ್ಲಾಘಿಸಿದ ಮೋದಿ 357 ಮಿಲಿಯನ್‌ ಟನ್‌ ಆಹಾರ ಧಾನ್ಯಗಳ ದಾಖಲೆಯ ಉತ್ಪಾದನೆಯ ಕುರಿತು ಮಾತನಾಡಿದರು. ಭಾರತವು ಕೃಷಿ ಕ್ಷೇತ್ರದಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಭಾರತವು 357 ಮಿಲಿಯನ್‌ ಟನ್‌ ಆಹಾರ ಧಾನ್ಯಗಳನ್ನು ಉತ್ಪಾದಿಸುವ ಮೂಲಕ ಐತಿಹಾಸಿಕ ದಾಖಲೆಗಳನ್ನು ಸ್ಥಾಪಿಸಿದೆ. 10 ವರ್ಷಗಳ ಹಿಂದಿನದಕ್ಕೆ ಹೋಲಿಸಿದರೆ, ಭಾರತದ ಆಹಾರ ಧಾನ್ಯ ಉತ್ಪಾದನೆಯು 100 ಮಿಲಿಯನ್‌ ಟನ್‌ಗಳಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

4 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

14 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

22 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

1 hour ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

2 hours ago