ಹರಿಯಾಣ: ಉಗ್ರರ ಭಾರೀ ದೊಡ್ಡ ದಾಳಿ ವಿಫಲವಾಗಿದ್ದು, ಹರಿಯಾಣದಲ್ಲಿ 300 ಕೆಜಿ ಆರ್‌ಡಿಎಕ್ಸ್, ಮದ್ದು ಗುಂಡುಗಳು ಪತ್ತೆಯಾಗಿವೆ.
ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು ಭಯೋತ್ಪಾದಕ ಸಂಪರ್ಕ ಹೊಂದಿರುವ ಶಂಕಿತ ವೈದ್ಯರೊಬ್ಬರಿಂದ ದೊಡ್ಡ ಪ್ರಮಾಣದ ಆರ್‌ಡಿಎಕ್ಸ್, ಎಕೆ-47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನು ಓದಿ: ಅಹಮದಾಬಾದ್| ಭಯೋತ್ಪಾದಕ ಸಂಚು ವಿಫಲ: ಮೂವರು ಶಂಕಿತರು ಅರೆಸ್ಟ್
ದಾಳಿಯ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವೈದ್ಯರೊಬ್ಬರ ಮನೆಯಿಂದ ಸುಮಾರು 300 ಕೆಜಿ ಆರ್‌ಡಿಎಕ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.
ಇಡೀ ಕಾರ್ಯಾಚರಣೆಯನ್ನು ರಹಸ್ಯವಾಗಿ ಬೇಧಿಸಿರುವ ಪೊಲೀಸರು ಘಟನೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.





