ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ.
ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ನಗರದಾದ್ಯಂತ ನೀರು ಸಂರಕ್ಷಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ.
ನೀರಿನ ಅಗತ್ಯಗಳಿಗೆ ಆದ್ಯತೆ ನೀಡುವ ಪ್ರಯತ್ನಗಳ ಭಾಗವಾಗಿ ನಗರದಾದ್ಯಂತ ಇರುವ ಈಜುಕೊಳಗಳಿಗೆ ನೀರಿನ ಸರಬರಾಜು ಸಂಪರ್ಕಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರು ಶೇ.20ರಷ್ಟು ನೀರು ಕಡಿತ ಎದುರಿಸಬೇಕಾಗಿದೆ.
ಕೈಗಾರಿಕಾ ಘಟಕಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕ್ರೀಡಾ ಕ್ಲಬ್‌ಗಳಿಗೆ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಗೊಳಿಸಲಾಗಿದೆ. ಪ್ಯಾಕೇಜ್ ಕುಡಿಯುವ ನೀರು ಮತ್ತು ಪಾನಿಯಾ ತಯಾರಕರು ಅಗತ್ಯಕ್ಕೆ ತಕ್ಕಂತೆ ನೀರನ್ನು ಬಳಸಬೇಕು. ನೀರಿನ ಕೊರತೆಯ ಸಮಯದಲ್ಲಿ ಅನಗತ್ಯ ನೀರು ಪೋಲು ಮಾಡದೇ ಲಭ್ಯವಿರುವ ನೀರಿನ ಸಂಪನ್ಮೂಲ ಬಳಸಿಕೊಳ್ಳಬೇಕು. ಕುಡಿಯುವ ನೀರನ್ನು ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…