ನವದೆಹಲಿ: ವಕ್ಫ್ ಜಮೀನು ಕಬಳಿಕೆ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ. ಇಲ್ಲ ಅಂದರೆ ನೀವು ರಾಜೀನಾಮೆ ನೀಡಬೇಕು ಎಂದು ಹೇಳುವ ಮೂಲಕ ಸಂಸದ ಅನುರಾಗ್ ಠಾಕೂರ್ ಹೇಳಿಕೆಗೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅವರು, ಅನುರಾಗ್ ಠಾಕೂರ್ ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಾರೆ. ಇದರಿಂದ ನನ್ನ ಚಾರಿತ್ರ್ಯ ಗೌರವಕ್ಕೆ ಧಕ್ಕೆಯಾಗಿದೆ. 60 ವರ್ಷದ ರಾಜಕೀಯದಲ್ಲಿ ಇಂತಹ ಆರೋಪ ನಿರೀಕ್ಷಿಸಿರಲಿಲ್ಲ. ಅನುರಾಗ್ ಠಾಕೂರ್ ಅವರ ಹೇಳಿಕೆ ವಿರೋಧಿಸಬೇಕಿದೆ ಎಂದರು.
ವಿಧಾನಸಭೆಯಲ್ಲಿ ಯಾರು ನನಗೆ ಬೆರಳೆತ್ತಿ ಮಾತನಾಡಲ್ಲ. ಬಿಜೆಪಿ ಮಾತ್ರ ನನ್ನ ಎದುರಿಸುವ ಪ್ರಯತ್ನ ಮಾಡುತ್ತಿದೆ. ಇಂತಹ ಬೆದರಿಕೆಗೆ ನಾನು ಹೆದರುವುದಿಲ್ಲ. ವಕ್ಫ್ ಭುಮಿಯನ್ನು ಒಂದಿಂಚೂ ಕಬಳಿಸಿಲ್ಲ. ಹೀಗಾಗಿ ಠಾಕೂರ್ ಕ್ಷಮೆ ಕೇಳಲೆಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.