ದೇಶ- ವಿದೇಶ

ಆರೋಪ ಸಾಬೀತಾದರೆ ರಾಜೀನಾಮೆ: ಮಲ್ಲಿಕಾರ್ಜುನ ಖರ್ಗೆ ಸವಾಲು

ನವದೆಹಲಿ: ವಕ್ಫ್‌ ಜಮೀನು ಕಬಳಿಕೆ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ. ಇಲ್ಲ ಅಂದರೆ ನೀವು ರಾಜೀನಾಮೆ ನೀಡಬೇಕು ಎಂದು ಹೇಳುವ ಮೂಲಕ ಸಂಸದ ಅನುರಾಗ್‌ ಠಾಕೂರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅವರು, ಅನುರಾಗ್‌ ಠಾಕೂರ್‌ ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಾರೆ. ಇದರಿಂದ ನನ್ನ ಚಾರಿತ್ರ್ಯ ಗೌರವಕ್ಕೆ ಧಕ್ಕೆಯಾಗಿದೆ. 60 ವರ್ಷದ ರಾಜಕೀಯದಲ್ಲಿ ಇಂತಹ ಆರೋಪ ನಿರೀಕ್ಷಿಸಿರಲಿಲ್ಲ. ಅನುರಾಗ್‌ ಠಾಕೂರ್‌ ಅವರ ಹೇಳಿಕೆ ವಿರೋಧಿಸಬೇಕಿದೆ ಎಂದರು.

ವಿಧಾನಸಭೆಯಲ್ಲಿ ಯಾರು ನನಗೆ ಬೆರಳೆತ್ತಿ ಮಾತನಾಡಲ್ಲ. ಬಿಜೆಪಿ ಮಾತ್ರ ನನ್ನ ಎದುರಿಸುವ ಪ್ರಯತ್ನ ಮಾಡುತ್ತಿದೆ. ಇಂತಹ ಬೆದರಿಕೆಗೆ ನಾನು ಹೆದರುವುದಿಲ್ಲ. ವಕ್ಫ್‌ ಭುಮಿಯನ್ನು ಒಂದಿಂಚೂ ಕಬಳಿಸಿಲ್ಲ. ಹೀಗಾಗಿ ಠಾಕೂರ್‌ ಕ್ಷಮೆ ಕೇಳಲೆಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 min ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

5 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

10 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

17 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago