ದೇಶ- ವಿದೇಶ

ಬಿಜೆಪಿ ಸಂಸದರಿಂದ ನನ್ನ ಮೇಲೆ ಹಲ್ಲೆ ಆಗಿದೆ: ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಬಗ್ಗೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಇದು ನನ್ನ ಮೇಲೆ ನಡೆದ ಹಲ್ಲೆಯಲ್ಲ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರ ಮೇಲೆ ನಡೆದ ಹಲ್ಲೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಸತ್‌ ಭವನದ ಮಕರ ದ್ವಾರದ ಬಳಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ. ನಿಯಂತ್ರಣ ತಪ್ಪಿ ನಾನು ಕೆಳಗೆ ಬಿದ್ದೆ. ಪರಿಣಾಮ ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನನ್ನ ಮೊಣಕಾಲುಗಳಿಗೆ ಗಂಭೀರ ಗಾಯ ಆಗಿದೆ ಎಂದು ಕಿಡಿಕಾರಿದ್ದಾರೆ.

ಈ ವೇಳೆ ನನ್ನನ್ನು ಕಾಂಗ್ರೆಸ್‌ ಸಂಸದರು ಸ್ಥಳಕ್ಕೆ ಕುರ್ಚಿ ತಂದು ಕೂರಿಸಿದರು. ನನ್ನ ಸಹೋದ್ಯೋಗಿಗಳ ನೆರವಿನಿಂದ ಕುಂಟುತ್ತಲೇ ಸದನಕ್ಕೆ ಬಂದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸ್ಪೀಕರ್‌ಗೆ ಬರೆದಿರುವ ಪತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಸಂಸತ್‌ ಭವನದ ನಡುವೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಸಂಸದರ ನಡುವೆ ಮುಖಾಮುಖಿ ನಡೆದ ಪರಿಣಾಮ ಬಿಜೆಪಿ ಸಂಸದ ಪ್ರತಾಪ್‌ ಚಂದ್ರ ಸಾರಂಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ತಳ್ಳಿದ್ದರಿಂದಲೇ ಗಾಯ ಆಗಿದೆ ಎಂದು ಬಿಜೆಪಿ ಸಂಸದರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಈ ಆರೋಪವನ್ನು ರಾಗಾ ತಳ್ಳಿ ಹಾಕಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

28 mins ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

34 mins ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

43 mins ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

49 mins ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

4 hours ago

ಎಸ್‌ಐಆರ್: ಪ್ರತಿಭಟನೆ ಹತ್ತಿಕ್ಕುವ ಯತ್ನ ಸರಿಯಲ್ಲ

ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ ಎಂದು…

5 hours ago