ನವದೆಹಲಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸುವ ಮೂಲಕ ವಿರೋಧಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿದಂತೆ ಇಂದು(ಜನವರಿ.15) ಕಾರ್ಯಕ್ರಮವೊದರಲ್ಲಿ ಮಾತನಾಡಿದ ಅವರು, ಭಾಗವತ್‌ರವರು ಇಂತಹ ಹೇಳಿಕೆ ನೀಡುವುದನ್ನು ಮುಂದುವರೆಸಿದರೆ ದೇಶದಲ್ಲಿ ಸಾರ್ವಜನಿಕರು ತಿರುಗಾಡುವುದೂ ಕೂಡ ಕಷ್ಟವಾಗಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತ್ತು ಎನ್ನುವುದಾದರೆ 1947ರಲ್ಲಿ ದೊರೆತ ಸ್ವಾತಂತ್ರ್ಯಕ್ಕಾಗಿ ನಡೆಸಿರುವ ಹೋರಾಟದ ಇತಿಹಾಸ ನೆನಪಿಲ್ಲವೇ, ಸ್ವಾತಂತ್ರ್ಯಕ್ಕಾಗಿ ಆರ್‌ಎಸ್‌ಎಸ್ ಹೋರಾಟ ನಡೆಸಿಲ್ಲವೇ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿನ 1947ರ ಸ್ವಾತಂತ್ರ್ಯಕ್ಕಾಗಿ ನೂರಾರರು ವರ್ಷಗಳ ಕಾಲ ಹೋರಾಟಗಾರರು ಪ್ರಾಣ ತ್ಯಾಗ ಮಾಡಿ ಹೋರಾಟ ನಡೆಸಿದ್ದಾರೆ. ಅವರ ಪ್ರಾಣ ತ್ಯಾಗ ಯಾವುದು ನೆನಪಿಲ್ಲವೇ? 1947ರಲ್ಲಿ ಸಿಕ್ಕ ಸ್ವಾತಂತ್ರ್ಯವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದಿರುವುದು ನಾಚಿಕೆ ಗೇಡಿನ ವಿಚಾರವಾಗಿದೆ. ಅಲ್ಲದೇ ಸ್ವಾತಂತ್ರ್ಯ ಹೋರಾಟದ ವೇಳೆ ಭಾಗವಹಿಸದೇ ಇರುವವರು ಇಂತಹ ಹೇಳಿಕೆಗಳನ್ನು ನಿಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.