ದೇಶ- ವಿದೇಶ

ಸ್ವಾತಂತ್ರ್ಯ ಬಗ್ಗೆ ಮೋಹನ್‌ ಭಾಗವತ್‌ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸುವ ಮೂಲಕ ವಿರೋಧಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿದಂತೆ ಇಂದು(ಜನವರಿ.15) ಕಾರ್ಯಕ್ರಮವೊದರಲ್ಲಿ ಮಾತನಾಡಿದ ಅವರು, ಭಾಗವತ್‌ರವರು ಇಂತಹ ಹೇಳಿಕೆ ನೀಡುವುದನ್ನು ಮುಂದುವರೆಸಿದರೆ ದೇಶದಲ್ಲಿ ಸಾರ್ವಜನಿಕರು ತಿರುಗಾಡುವುದೂ ಕೂಡ ಕಷ್ಟವಾಗಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತ್ತು ಎನ್ನುವುದಾದರೆ 1947ರಲ್ಲಿ ದೊರೆತ ಸ್ವಾತಂತ್ರ್ಯಕ್ಕಾಗಿ ನಡೆಸಿರುವ ಹೋರಾಟದ ಇತಿಹಾಸ ನೆನಪಿಲ್ಲವೇ, ಸ್ವಾತಂತ್ರ್ಯಕ್ಕಾಗಿ ಆರ್‌ಎಸ್‌ಎಸ್‌ ಹೋರಾಟ ನಡೆಸಿಲ್ಲವೇ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿನ 1947ರ ಸ್ವಾತಂತ್ರ್ಯಕ್ಕಾಗಿ ನೂರಾರರು ವರ್ಷಗಳ ಕಾಲ ಹೋರಾಟಗಾರರು ಪ್ರಾಣ ತ್ಯಾಗ ಮಾಡಿ ಹೋರಾಟ ನಡೆಸಿದ್ದಾರೆ. ಅವರ ಪ್ರಾಣ ತ್ಯಾಗ ಯಾವುದು ನೆನಪಿಲ್ಲವೇ? 1947ರಲ್ಲಿ ಸಿಕ್ಕ ಸ್ವಾತಂತ್ರ್ಯವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದಿರುವುದು ನಾಚಿಕೆ ಗೇಡಿನ ವಿಚಾರವಾಗಿದೆ. ಅಲ್ಲದೇ ಸ್ವಾತಂತ್ರ್ಯ ಹೋರಾಟದ ವೇಳೆ ಭಾಗವಹಿಸದೇ ಇರುವವರು ಇಂತಹ ಹೇಳಿಕೆಗಳನ್ನು ನಿಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

7 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

7 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

14 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

14 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

14 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

14 hours ago