ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ವರ್ತನೆ ಸರಿಯಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವಿಚಾರವಾಗಿ ಸರ್ವಪಕ್ಷ ಸಭೆಗೆ ಹಾಜರಾಗದೇ ಪ್ರಧಾನಿ ಮೋದಿ ಅವರು ಚುನಾವಣಾ ಭಾಷಣ ಮಾಡಲು ಬಿಹಾರಕ್ಕೆ ಹೋಗುತ್ತಾರೆ. ಅವರ ವರ್ತನೆ ಸರಿಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪಹಲ್ಗಾಮ್‌ ವಿಚಾರವಾಗಿ ಪ್ರಧಾನಿ ಸರ್ವಪಕ್ಷ ಸಭೆ ಕರೆದಿದ್ದರು. ಸಭೆಗೆ ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೆಲ್ಲರೂ ಭಾಗಿಯಾಗಿದ್ದೆವು. ಸರ್ಕಾರದ ವತಿಯಿಂದ ಪ್ರಧಾನಿಗಳು ಹಾಜರಾಗಬೇಕಿತ್ತು. ಆದರೆ ಅವರ ಹಾಜರಾತಿ ಇರಲಿಲ್ಲ. ಪ್ರಧಾನಿಗಳ ಈ ವರ್ತನೆ ಸರಿಯಿಲ್ಲ ಎಂದು ಕಿಡಿಕಾರಿದರು.

ಇನ್ನು ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಹೀಗಾಗಿ ಘಟನೆಯನ್ನು ಸವಾಲಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದೇವೆ ಎಂದರು.

 

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

8 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

9 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

10 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

10 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

11 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago