Mysore
28
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ನೀಟ್‌ ರದ್ದತಿಗೆ ಒತ್ತಾಯಿಸಿ ಮೋದಿಗೆ ಪತ್ರ ಬರೆದ ಮಮತಾ

ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ನಡೆದ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಮಮತಾ ಅವರು ಮೋದಿ ಅವರಿಗೆ ಪತ್ರ ಬರೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಹಿಂದೆ ನೀಟ್‌ ಪ್ರವೇಶ ಪರೀಕ್ಷೆಯನ್ನು ಆಯಾ ರಾಜ್ಯಗಳೆ ನಡೆಸುತ್ತಿದ್ದವು. ಅದರಂತೆ ಹಿಂದಿನ ವ್ಯವಸ್ಥೆಗಳನ್ನೇ ಜಾರಿಗೊಳಿಸಿ ನೀಟ್‌ ಪರೀಕ್ಷೆಯನ್ನು ರದ್ದು ಮಾಡಬೇಕು. ಹೀಗೆ ಮಾಡುವುದರಿಂದ, ಪರೀಕ್ಷೆ ಅಕ್ರಮಗಳಿಗೆ ಕಡಿವಾಣ ಹಾಕಬಹುದು ಜೊತೆಗೆ ವ್ಯವಸ್ಥೆಯನ್ನು ಸಹಜಸ್ಥಿತಿಗೆ ತಂದು ವಿದ್ಯಾರ್ಥಿಗಳಲ್ಲಿ ವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸಬಹುದುಎ ಎಂದು ಬಲವಾಗಿ ಒತ್ತಾಯಿಸಿದ್ದಾರೆ.

Tags:
error: Content is protected !!