ದೇಶ- ವಿದೇಶ

ಪಹಲ್ಗಾಮ್‌ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ವ್ಯಕ್ತಿ ಬಂಧನ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಏ.೨೨ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ೨೬ ವರ್ಷದ ಮೊಹಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕಟಾರಿಯನ್ನು ಬಂಽಸಲಾಗಿದ್ದು, ವಿಚಾರಣೆ ವೇಳೆ ಜಮು-ಕಾಶ್ಮೀರದ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

ಯೂಸೂಫ್ ಕಟಾರಿ ಯಾರು? :
ಕುಲ್ಗಾಮ್ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್ ೨೨ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ | ಭೂಗರ್ಭ ಜಲಮಟ್ಟ ಹೆಚ್ಚಿಸುವ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು

ಪಹಲ್ಗಾಮ್ ಉಗ್ರರನ್ನು ಕೆಲ ದಿನಗಳ ಹಿಂದೆ ನಡೆದ ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಚಿನಾರ್ ಕಾರ್ಪಸ್ ಬೆಟಾಲಿಯನ್ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನು ಬಂಧಿಸಲಾಗಿದೆ.‌

ಮೇ ೨೨ರಿಂದ ೨-೩ ವಾರಗಳ ಕಾಲ ಸತತವಾಗಿ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್ ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-೪೭ ರೈಫಲ್ ಹಾಗೂ ಎಂ -೯ ಅಸಾಲ್?ಟ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನು ಪಹಲ್ಗಾಮ್ ದಾಳಿಯಲ್ಲಿ ಬಳಕೆ ಮಾಡಲಾಗಿದೆ ಎನ್ನುವುದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಗಿದೆ.

ಆಂದೋಲನ ಡೆಸ್ಕ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

1 hour ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

1 hour ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago