ನವದೆಹಲಿ: ಜನವರಿ.11, 12ಕ್ಕೆ ವಿಕಸಿತ ಭಾರತ ಯುವ ನಾಯಕರ ಸಂವಾದ ಆಯೋಜನೆ ಮಾಡಲಾಗಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.
116ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನವರಿ.12ರಂದು ಸ್ವಾಮಿ ವಿವೇಕಾನಂದರ 162ನೇ ಜಯಂತಿಯನ್ನು ಬಹಳ ವಿಶೇಷವಾಗಿ ಆಚರಣೆ ಮಾಡಲಾಗುವುದು ಎಂದರು.
ಇನ್ನು ಗುಬ್ಬಚ್ಚಿಗಳ ಸಂತತಿ ಉಳಿಸಿಕೊಳ್ಳುವ ಬಗ್ಗೆ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಗುಬ್ಬಚ್ಚಿಗಳು ಪ್ರಮುಖ ಪಾತ್ರ ವಹಿಸುತ್ತವೆ.
ಆದರೆ ಇಂದು ನಗರಗಳಲ್ಲಿ ಗುಬ್ಬಚ್ಚಿಗಳು ವಿರಳವಾಗಿ ಕಂಡುಬರುತ್ತವೆ. ಗುಬ್ಬಚ್ಚಿಗಳ ಸಂತತಿಯನ್ನು ಹೆಚ್ಚಿಸುವ ಅಭಿಯಾನ ನಡೆಸಬೇಕು. ಮಕ್ಕಳಿಗೂ ಕೂಡ ಗುಬ್ಬಚ್ಚಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.